ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

KAS ಸೇರಿ ಗ್ರೂಪ್ 'ಎ' ಮತ್ತು ಗ್ರೂಪ್ ' ಬಿ'ಯ 276 ಹುದ್ದೆ ಭರ್ತಿಗೆ ಕ್ಷಣಗಣನೆ ಶುರು !!

10:14 AM Dec 11, 2023 IST | ಅಶ್ವಿನಿ ಹೆಬ್ಬಾರ್
UpdateAt: 10:14 AM Dec 11, 2023 IST
Advertisement

KAS Recruitment: ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳೇ ಗಮನಿಸಿ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಕೆಎಎಸ್ (KAS Recruitment)ಸೇರಿದಂತೆ ಗ್ರೂಪ್ 'ಎ' ಮತ್ತು ಗ್ರೂಪ್ 'ಬಿ' ವೃಂದದ ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ ಒಟ್ಟು 276 ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ (State Government)ಯೋಜನೆ ಹಾಕಿಕೊಂಡಿದೆ.

Advertisement

'ಕೋವಿಡ್- 19 ಸಾಂಕ್ರಾಮಿಕ ರೋಗ ಹಾಗೂ ಇತರ ಆಡಳಿತಾತ್ಮಕ ಕಾರಣಗಳ ಹಿನ್ನೆಲೆಯಲ್ಲಿ ಸುಮಾರು ನಾಲ್ಕು ವರ್ಷಗಳಿಂದ ಯಾವುದೇ ಗೆಜೆಡೆಟ್ ಪ್ರೊಬೇಷನರಿ ಹುದ್ದೆ ಭರ್ತಿ ಮಾಡಲು ಸಾಧ್ಯವಾಗಿಲ್ಲ' ಎಂದು ವಿಧಾನ ಪರಿಷತ್‌ನಲ್ಲಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಈ ನಡುವೆ, ಹುದ್ದೆಗಳ ಭರ್ತಿಗೆ ಹೊರಡಿಸುವ ಅಧಿಸೂಚನೆಯಲ್ಲಿ ಎಲ್ಲ ಅರ್ಹ ಅಭ್ಯರ್ಥಿಗಳಿಗೆ ಒಂದು ಬಾರಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಿ ಅವಕಾಶ ಕಲ್ಪಿಸಬೇಕೆಂದು ಹುದ್ದೆ ಆಕಾಂಕ್ಷಿಗಳು ಮುಖ್ಯಮಂತ್ರಿಗೆ ಬೇಡಿಕೆಯಿಟ್ಟಿದ್ದಾರೆ.4 ಲಕ್ಷಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ನೇಮಕಾತಿ ಅಧಿಸೂಚನೆಯ ನಿರೀಕ್ಷೆಯಲ್ಲಿದ್ದಾರೆ. 2017ನೇ ಸಾಲಿನಲ್ಲಿ ಗೆಜೆಟೆಡ್‌ ಪ್ರೊಬೇಷನರಿ ಅಧಿಕಾರಿಗಳ 106 ಹುದ್ದೆಗಳಿಗೆ ನೇಮಕಾತಿ ನಡೆಸಲಾಗಿದೆ.

ಇದನ್ನೂ ಓದಿ: Gruha Lakshmi Yojana: ಯಜಮಾನಿಯರೇ 'ಗೃಹಲಕ್ಷ್ಮೀ'ಗೆ ಆಗಸ್ಟ್ 15ಕ್ಕೂ ಮೊದಲು ಅರ್ಜಿ ಸಲ್ಲಿಸಿದ್ದೀರಾ ?! ಹಾಗಿದ್ರೆ ಮಿಸ್ ಮಾಡ್ದೆ ಈ ಕೆಲಸ ಮಾಡ್ಲೇಬೇಕು!! ಇಲ್ಲಾಂದ್ರೆ ಹಣ ಕ್ಯಾನ್ಸಲ್

Advertisement

Related News

Advertisement
Advertisement