ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Sakala Scheme: 'ಸಕಾಲ ಯೋಜನೆ' ಬಗ್ಗೆ ನಿಮಗೆಷ್ಟು ಗೊತ್ತು ?! ಬಂದಿದೆ ನೋಡಿ ಹೊಸ ಅಪ್ಡೇಟ್ !!

10:17 AM Dec 06, 2023 IST | ಅಶ್ವಿನಿ ಹೆಬ್ಬಾರ್
UpdateAt: 10:18 AM Dec 06, 2023 IST
Image credit: Vijay Karantaka
Advertisement

Sakala Yojan: ಕರ್ನಾಟಕ ಸರ್ಕಾರ ಸಕಾಲ ಯೋಜನೆಯಲ್ಲಿ (Sakala Yojan) ಮಹತ್ವದ ಬದಲಾವಣೆ ತರಲಾಗಿದೆ. ಎಸ್‌ಎಂಎಸ್‌ (SMS)ಮೂಲಕ ಮೇಲ್ಮನವಿ ಸಲ್ಲಿಸಲು ಅನುವು ಮಾಡಿಕೊಡಲಾಗಿದೆ. ಸಕಾಲ ಮಿಷನ್‌ನ ಹೆಚ್ಚುವರಿ ಯೋಜನಾ ನಿರ್ದೇಶಕಿ ಪಲ್ಲವಿ ಆಕುರಾತಿ ಪತ್ರಿಕಾ ಪ್ರಕಟಣೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ.

Advertisement

ಸಕಾಲ ಅಧಿಸೂಚಿತ ಸೇವೆಗಳ ಅಡಿಯಲ್ಲಿ ಸಲ್ಲಿಸುವ ಅರ್ಜಿಗಳು ತಿರಸ್ಕೃತವಾಗಿದ್ದಲ್ಲಿ ಅಂತಹವರ ನೊಂದಾಯಿತ ಮೊಬೈಲ್ ಸಂಖ್ಯೆಗೆ (Registered Mobile Number)ಪ್ರಥಮ ಮೇಲ್ಮನವಿ ಸಲ್ಲಿಸಲು ನೆರವಾಗುವ ಲಿಂಕ್‌ಗಳನ್ನು ಕಳುಹಿಸುವ ವ್ಯವಸ್ಥೆಯನ್ನು ಸಕಾಲ ಮಿಷನ್ ರಾಜ್ಯದಲ್ಲಿ ಜಾರಿಗೆ ತಂದಿದೆ. ಸಕಾಲ ಯೋಜನೆಯಡಿ ಅರ್ಜಿ ಸಲ್ಲಿಸುತ್ತಿರುವವರ ಸಂಖ್ಯೆಯನ್ನು ಪರಿಗಣಿಸಿ ಸಕಾಲ ಮಿಷನ್‌ ಹೊಸ ಹೊಸ ಸೇವೆಗಳನ್ನು ಸೇರಿಸುತ್ತಿದೆ. ಸಕಾಲ ದಡಿ ಅರ್ಜಿ ತಿರಸ್ಕೃತಗೊಂಡಿದ್ದಲ್ಲಿ ಅರ್ಜಿದಾರರು ಸಕ್ಷಮ ಪ್ರಾಧಿಕಾರಿಗೆ ಪ್ರಥಮ ಮೇಲ್ಮನವಿಯನ್ನು ಸಲ್ಲಿಸಲು ಸಕಾಲ ಮಿಷನ್ ಅನುವು ಮಾಡಿಕೊಟ್ಟಿದೆ. ನಾಗರಿಕರು ಈ ಅವಕಾಶವನ್ನು ಬಳಸಿಕೊಳ್ಳಲು ಅನುವು ಮಾಡಿಕೊಡುವ ನಿಟ್ಟಿನಲ್ಲಿ ಅಪೀಲು ಹಾಕಲು ಲಿಂಕ್‌ ಅನ್ನು ಎಸ್‌ಎಂಎಸ್‌ ಮೂಲಕ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ಶಿಕ್ಷಕರ ನೇಮಕಾತಿ ವಿಚಾರ- ಬೆಳ್ಳಂಬೆಳಗ್ಗೆಯೇ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಮಧು ಬಂಗಾರಪ್ಪ

Advertisement

Related News

Advertisement
Advertisement