ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Karnataka News: ರಾಜ್ಯ ವಿಭಜನೆ!! ಎರಡು ಹೊಸ ಜಿಲ್ಲೆಗಳು ಉದಯ? ಆ ಜಿಲ್ಲೆಗಳು ಯಾವುವು?

09:43 AM Feb 15, 2024 IST | ಹೊಸ ಕನ್ನಡ
UpdateAt: 09:46 AM Feb 15, 2024 IST
Advertisement

ಬೆಂಗಳೂರು : ಭೌಗೋಳಿಕ ವಿಸ್ತೀರ್ಣವನ್ನು ಗಮನಿಸಿದರೆ ಅತಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಯನ್ನು ಮೂರು ಜಿಲ್ಲೆಗಳಾಗಿ ವಿಭಾಗಿಸುವ ಸಾಧ್ಯತೆ ಇದೆ . ಈ ಭಾಗದ ವಿವಿಧ ಸಂಘಟನೆಗಳು ಮತ್ತು ಜನರಲ್ಲಿ ಜಿಲ್ಲೆಯನ್ನು ಮೂರು ಜಿಲ್ಲೆಗಳಾಗಿ ವಿಭಾಗಿಸುವ ಕೂಗು ಕೇಳಿಬಂದಿದೆ.

Advertisement

ಇದೇ ಫೆ. 16 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಲಿದ್ದು, ಇದೇ ಸಂದರ್ಭದಲ್ಲಿ ಚಿಕ್ಕೋಡಿ ಮತ್ತು ಗೋಕಾಕವನ್ನು ಹೊಸ ಜಿಲ್ಲೆಗಳೆಂದು ಘೋಷಣೆ ಮಾಡುವ ಸಾಧ್ಯತೆ ಬಲವಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Holiday: ನಾಳೆ ಈ ಜಿಲ್ಲೆಗಳಲ್ಲಿ ರಜೆ ಘೋಷಣೆ

Advertisement

ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಬಜೆಟ್ ಮಂಡನೆ ಮಾಡುವ ವೇಳೆಯಲ್ಲಿ ಚಿಕ್ಕೋಡಿ ಮತ್ತು ಗೋಕಾಕವನ್ನು ಹೊಸ ಜಿಲ್ಲೆಗಳೆಂದು ಘೋಷಣೆ ಮಾಡಬಹುದು. ಬಜೆಟ್ ಮಂಡನೆ ಮಾಡುವ ಮುನ್ನ ಈ ಬಗ್ಗೆ ವಿವರಗಳನ್ನು ನೀಡುವಂತೆ ಜಿಲ್ಲಾಡಳಿತಕ್ಕೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಚಿಕ್ಕೋಡಿ ಹಾಗೂ ಗೋಕಾಕ ಗಳನ್ನು ಹೊಸ ಜಿಲ್ಲೆಗಳಾಗಿ ಮಾಡಬೇಕೆಂದು ವಿವಿಧ ಸಂಘಟನೆಗಳು, ಸಂಘ ಸಂಸ್ಥೆಗಳ ಮುಖಂಡರು ಒತ್ತಾಯ ಮಾಡುತ್ತಲೇ ಬಂದಿದ್ದಾರೆ. ಆಡಳಿತಾತ್ಮಕ ಉದ್ದೇಶದಿಂದ ಬೈಲಹೊಂಗಲ ಮತ್ತು ಅಥಣಿಯ ಎರಡು ತಾಲೂಕುಗಳನ್ನು ಹೊಸ ಜಿಲ್ಲೆಗಳನ್ನಾಗಿ ಘೋಷಿಸುವಂತೆ ಮುಖಂಡರು ಒತ್ತಾಯ ಮಾಡಿದ್ದಾರೆ.

1997 ರಲ್ಲಿ ಅಂದಿನ ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಅವರು ಚಿಕ್ಕೋಡಿ ಮತ್ತು ಗೋಕಾಕವನ್ನು ಹೊಸ ಜಿಲ್ಲೆಗಳಾಗಿ ಘೋಷಣೆ ಮಾಡಲು ಅಧಿಸೂಚನೆಯನ್ನು ಹೊರಡಿಸಿದರು, ಆದರೆ ಬೆಳಗಾವಿ ಜಿಲ್ಲೆಯ ಗಡಿಭಾಗದಲ್ಲಿ ಮರಾಠಿ ಪ್ರಾಬಲ್ಯವನ್ನು ತಡೆಯಲು ವಿವಿಧ ಕನ್ನಡ ಸಂಘಟನೆಗಳ ಒತ್ತಡದಿಂದಾಗಿ ಈ ಕಾರ್ಯ ನಿಂತು ಹೋಯಿತು.

ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿ, ಸರ್ಕಾರ ಆಡಳಿತ ಅನುಕೂಲಕ್ಕಾಗಿ ಬೆಳಗಾವಿಯನ್ನು ಮೂರು ಜಿಲ್ಲೆಗಳಾಗಿ ವಿಂಗಡಿಸಬೇಕಾಗಿದೆ. ಚಿಕ್ಕೋಡಿ ಮತ್ತು ಗೋಕಾಕ್ ತಾಲೂಕುಗಳನ್ನು ಹೊಸ ಜಿಲ್ಲಾ ಕೇಂದ್ರವನ್ನಾಗಿ ಮಾಡಲು ಈ ಎರಡು ತಾಲೂಕುಗಳು ಅಗತ್ಯವಿರುವ ಮೂಲಸೌಕರ್ಯ ಮತ್ತು ಮಾನವಶಕ್ತಿಯನ್ನು ಹೊಂದಿವೆ. ಚಿಕ್ಕೋಡಿ, ಗೋಕಾಕ್ ಭಾಗದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳ ಮುಖಂಡರು ಕೂಡ ಎರಡು ತಾಲೂಕುಗಳನ್ನು ಹೊಸ ಜಿಲ್ಲೆಗಳನ್ನಾಗಿ ಘೋಷಿಸಬೇಕು ಎಂಬ ಅಭಿಪ್ರಾಯ ಹೊರ ಹಾಕಿದ್ದಾರೆ.

ಬೆಳಗಾವಿ ಜಿಲ್ಲೆಯೂ ಬರೋಬ್ಬರಿ 15 ತಾಲೂಕುಗಳು, 18 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡ ದೊಡ್ದ ಜಿಲ್ಲೆಯಾಗಿದೆ. ಇನ್ನೂ ದಶಕಗಳಿಂದಲೂ ಚಿಕ್ಕೋಡಿ, ಗೋಕಾಕ್‌, ಬೈಲಹೊಂಗಲ ಮತ್ತು ಅಥಣಿ ಜಿಲ್ಲೆಗಳನ್ನು ರಚಿಸುವಂತೆ ನಿರಂತರ ಹೋರಾಟ ನಡೆಯುತ್ತ ಬಂದಿದೆ. ಈ ಹಿನ್ನೆಲೆ ಸ್ಥಳೀಯ ಜಿಲ್ಲಾ ಹೋರಾಟ ಸಮಿತಿ ಸಲ್ಲಿಸಿದ್ದ ಮನವಿಯನ್ನು ರಾಜ್ಯ ಸರ್ಕಾರ ಒಪ್ಪಿಕೊಂಡಿದ್ದು, ನಿಗದಿತ ‌ಸಮಯದಲ್ಲಿ ವರದಿ ಸಲ್ಲಿಸುವಂತೆ ಪ್ರಾದೇಶಿಕ ಆಯುಕ್ತ ಸಂಜಯ್ ಶೆಟ್ಟೆನ್ನವರ ಆದೇಶಿಸಲಾಗಿದೆ.

Related News

Advertisement
Advertisement