ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Gruhalakshmi scheme: 'ಗೃಹಲಕ್ಷ್ಮೀ' ಹಣ ಬಾರದವರಿಗೆ ಮಹತ್ವದ ಸುದ್ದಿ- ಮನೆಬಾಗಿಲಿಗೇ ಬರ್ತಾರೆ ಅಂಗನವಾಡಿ ಕಾರ್ಯಕರ್ತೆಯರು, ಬೇಗ ಈ ದಾಖಲೆ ರೆಡಿ ಮಾಡಿ

12:22 PM Nov 29, 2023 IST | ಅಶ್ವಿನಿ ಹೆಬ್ಬಾರ್
UpdateAt: 12:22 PM Nov 29, 2023 IST
Advertisement

 

Advertisement

 

Gruhalakshmi scheme: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಕೂಡ ಒಂದಾಗಿದ್ದು, ಈಗಾಗಲೇ ಕೆಲವು ಮಹಿಳೆಯರ ಖಾತೆಗೆ ಹಣ ಜಮಾ ಆಗಿದ್ದು, ಇನ್ನೂ ಕೆಲವರ ಅಕೌಂಟ್ಗೆ ಜಮೆ ಆಗಿಲ್ಲ. ಈ ಹಿನ್ನಲೆ ರಾಜ್ಯಾದ್ಯಂತ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ, ಗೃಹಲಕ್ಷ್ಮೀ ಯೋಜನೆ (Gruhalakshmi scheme) ಹಣ ಜಮೆ ಮಾಡಲು ತಾಂತ್ರಿಕ ಸಮಸ್ಯೆಗಳು ಅಡ್ಡಿಯಾಗಿದ್ದು, ಇದಕ್ಕೆ ಪರಿಹಾರ ನೀಡುವ ನಿಟ್ಟಿನಲ್ಲಿ ಸುಧಾರಣ ಕ್ರಮಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಂದಾಗಿದೆ.

Advertisement

ರಾಜ್ಯದ ಎಲ್ಲಾ ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಕೇಂದ್ರ ಕಚೇರಿಯಿಂದಲೇ ಯೋಜನೆ ಹಣ ಬಿಡುಗಡೆಯ ಮಾಡಲು ತಯಾರಿ ನಡೆಸುತ್ತಿದೆ. ಇದರ ಜೊತೆಗೆ,ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯು ಅಂಗನವಾಡಿ ಕಾರ‍್ಯಕರ್ತೆಯರನ್ನು ಮನೆ ಭೇಟಿಗೆ ಸೂಚನೆ ನೀಡಿದ್ದು, ಈ ಮೂಲಕ ಫಲಾನುಭವಿಗಳಿಗೆ ಯೋಜನೆ ಹಣ ತಲುಪಿಸಲು ರಾಜ್ಯ ಸರ್ಕಾರ ಯೋಜನೆ ಹಾಕಿಕೊಂಡಿದೆ.ರಾಜ್ಯ ಸರಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಗೃಹಲಕ್ಷ್ಮೀ ಯೋಜನೆ ಹಣವನ್ನು ಫಲಾನುಭವಿಗಳಿಗೆ ಪ್ರತಿ ತಿಂಗಳ 20 ತಾರೀಖಿನೊಳಗೆ ಹಣ ವರ್ಗಾವಣೆ ಮಾಡಲು ಸೂಚಿಸಿದೆ.

ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ತಾಂತ್ರಿಕ ಸಮಸ್ಯೆಯಿಂದ ಯೋಜನೆಯ ಹಣ ತಲುಪಿಸುವ ನಿಟ್ಟಿನಲ್ಲಿ ಅಂಗನವಾಡಿ ಕಾರ‍್ಯಕರ್ತೆಯರಿಗೆ ಇಲಾಖೆ ಜವಾಬ್ದಾರಿ ನೀಡಿದೆ. ಈ ಸಂಬಂಧ ರಾಜ್ಯದ ಎಲ್ಲಾ ಜಿಲ್ಲೆಯಲ್ಲಿನ ಅಂಗನವಾಡಿ ಕಾರ‍್ಯಕರ್ತೆಯರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಮನೆಗೆ ಭೇಟಿ ಫಲಾನುಭವಿಗಳಿಗೆ ಗೃಹಲಲಕ್ಷ್ಮೀ ಯೋಜನೆ ಕುರಿತು ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ. ಇದರ ಜೊತೆಗೆ, ಅರ್ಹರಿಗೆ ಯೋಜನೆಯ ಹಣ ಬಾರದಿದ್ದರೆ, ಆಗಿರುವ ಸಮಸ್ಯೆಯನ್ನು ಬಗೆಹರಿಸಲು ತಿಳಿಸಲಾಗಿದೆ.

ಇದನ್ನೂ ಓದಿ: ಖ್ಯಾತ ನಟಿಗೆ ಮಂಚಕ್ಕೆ ಬಾ ಎಂದ ಸ್ಟಾರ್ ನಟನ ತಂದೆ - ಮುದುಕನ ಮುಖವಾಡವನ್ನೇ ಖಳಚಿ ಬಿಟ್ಲು ನಟಿ !!

Related News

Advertisement
Advertisement