ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Mother tongue education: ಕನ್ನಡಿಗರಿಗೆ ಶಾಕ್ ಕೊಟ್ಟ ಮೋದಿ ಸರ್ಕಾರ!!

06:27 AM Dec 06, 2023 IST | ಹೊಸ ಕನ್ನಡ
UpdateAt: 06:27 AM Dec 06, 2023 IST
Advertisement

Mother tongue education: ರಾಜ್ಯದಲ್ಲಿ ಮಾತೃಭಾಷೆ ಶಿಕ್ಷಣ ವ್ಯವಸ್ಥೆ(Mother tongue education) ಜಾರಿ ಕುರಿತು ಅನೇಕ ವರ್ಷಗಳಿಂದಲೂ ಕೂಡ ಬೇರೆ ಬೇರೆ ಸರ್ಕಾರಗಳ ಅವಧಿಯಲ್ಲಿ ಚರ್ಚೆಯಾಗಿದೆ. ಈಗ ಮಧು ಬಂಗಾರಪ್ಪನವರು(Madhu bangarappa) ಶಿಕ್ಷಣ ಸಚಿವರಾದ ಬಳಿಕ ವೈಯಕ್ತಿಕ ಆಸಕ್ತಿಯನ್ನು ತೋರಿ ಈ ಮಸೂದೆಯನ್ನು ಜಾರಿ ಮಾಡಬೇಕೆಂದು ಪಟ್ಟು ಹಿಡಿದಿದ್ದಾರೆ. ಆದರೆ ಈ ನಡುವೆ ಇದಕ್ಕೆ ವಿಘ್ನ ಎದುರಾಗಿದ್ದ ಕೇಂದ್ರ ಸರ್ಕಾರ ಈ ಮಸೂದೆಯನ್ನು ತಿರಸ್ಕರಿಸಿದೆ.

Advertisement

ಹೌದು, ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲೂ ಒಂದರಿಂದ 5ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಮಾತೃ ಭಾಷೆ ಅಥವಾ ರಾಜ್ಯ ಭಾಷೆಯನ್ನು ಶಿಕ್ಷಣ ಮಾಧ್ಯಮವಾಗಿ ಕಡ್ಡಾಯಗೊಳಿಸಬೇಕೆಂಬುದು ಕರ್ನಾಟಕ ಸರ್ಕಾರದ ಅಭಿಲಾಷೆ. ಆದರೆ ಈ ಮಸೂದೆಯನ್ನು ಕೇಂದ್ರ ಸರಕಾರ ತಿರಸ್ಕಾರಗೊಳಿಸಿದೆ ಎಂದು ಶಿಕ್ಷಣ ಸಚಿವರಾದ ಮಧುಬಂಗಾರಪ್ಪಪವರು ಹೇಳಿದ್ದಾರೆ.

Advertisement

ಅಂದಹಾಗೆ ಬೆಳಗಾವಿಯಲ್ಲಿ(Belagavi) ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ, ವಿಧಾನ ಪರಿಷತ್ತಿನ ಪ್ರಶೋತ್ತರ ಕಲಾಪದಲ್ಲೆ ಭಾಗವಹಿಸಿದ ಅವರಿಗೆ ಕಾಂಗ್ರೆಸ್ ಸದಸ್ಯ ಯು.ಬಿ.ವೆಂಕಟೇಶ್ ಈ ಕುರಿತಂತೆ ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಉತ್ತರಿದ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು 2015ರಲ್ಲಿ ರಾಜ್ಯದ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ 1ರಿಂದ 5ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಮಾತೃ ಭಾಷೆ ಅಥವಾ ರಾಜ್ಯ ಭಾಷೆಯನ್ನು ಶಿಕ್ಷಣ ಮಾಧ್ಯಮವಾಗಿ ಕಡ್ಡಾಯಗೊಳಿಸಿ ಮಸೂದೆಯನ್ನು ಅಂಗೀಕರಿಸಲಾಗಿತ್ತು. ಬಳಿಕ ಇದನ್ನು ಕೇಂದ್ರ ಸರ್ಕಾರದ ಅಂಕಿತಕ್ಕೆ ಕಳುಹಿಸಿಕೊಡಲಾಗಿತ್ತು. ಆದರೆ, ಕೇಂದ್ರ ಸರ್ಕಾರವು ಮಾತೃಭಾಷೆನ್ನು ಕಡ್ಡಾಯಗೊಳಿಸುವುದು, ಶಿಕ್ಷಣದ ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಮಸೂದೆಯನ್ನು ತಿರಸ್ಕಾರ ಮಾಡಿದೆ ಎಂದು ಹೇಳಿದ್ದಾರೆ.

ಅಲ್ಲದೆ ಪ್ರಥಮ ಭಾಷೆಯಾಗಿ ಕನ್ನಡವನ್ನು ಕಡ್ಡಾಯ ಮಾಡಿದ್ದೇವೆ. ಆದರೆ ಕೇಂದ್ರ ಸರಕಾರ ಮೀಡಿಯಂ ಆಫ್ ಸ್ಟಡಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪು ಆಧರಿಸಿ ರಾಜ್ಯದ ಈ ವಿಧೇಯಕವನ್ನು ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಕೇಂದ್ರ ಶಿಕ್ಷಣ ಇಲಾಖೆ ತಿರಸ್ಕರಿಸಿದೆ ಎಂದೂ ಸಚಿವರು ಮಾಹಿತಿ ನೀಡಿದರು.

ಇದನ್ನೂ ಓದಿ: Mangalore Goa Vande Bharat : ಈ ದಿನದಿಂದ ಮಂಗಳೂರು-ಗೋವಾ ನಡುವೆ ಸಂಚರಿಸಲಿದೆ ವಂದೇ ಭಾರತ್ ರೈಲು

Related News

Advertisement
Advertisement