ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Vehicles Rule: ವಾಹನ ಸವಾರರೇ ಗಮನಿಸಿ- ನಿಮ್ಮ ವಾಹನಗಳಿಗೆ ಇದರ ಅಳವಡಿಕೆ ಕಡ್ಡಾಯ, ಸರ್ಕಾರದ ಮಹತ್ವದ ಆದೇಶ

10:38 AM Nov 28, 2023 IST | ಕಾವ್ಯ ವಾಣಿ
UpdateAt: 10:38 AM Nov 28, 2023 IST
Advertisement

Emergency panic button: ಡಿಸೆಂಬರ್‌ 1ರಿಂದ ಟ್ಯಾಕ್ಸಿ, ಕ್ಯಾಬ್‌ ಸೇರಿದಂತೆ ಸಾರ್ವಜನಿಕ ಸೇವಾ ವಾಹನಗಳಿಗೆ ಹೊಸ ನಿಯಮ (Vehicles Rule) ಜಾರಿಗೆ ಬರಲಿದೆ. ಈಗಾಗಲೇ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಯಾವುದೇ ರೀತಿ ಕ್ರಮ ಕೈಗೊಂಡರೂ ಸಹ ಸಾರ್ವಜನಿಕ ಸೇವಾ ವಾಹನಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ದರೋಡೆ ಮುಂತಾದ ಘಟನೆಗಳು ನಡೆಯುತ್ತಲೇ ಇವೆ. ಹೀಗಾಗಿ ಸರ್ಕಾರ ಎಮರ್ಜೆನ್ಸಿ ಪ್ಯಾನಿಕ್ ಬಟನ್ (Emergency panic button) ಕಡ್ಡಾಯಗೊಳಿಸಿದೆ.

Advertisement

ಹೌದು, ಎಲ್ಲ ರೀತಿಯ ಸಾರ್ವಜನಿಕ ಸೇವಾ ವಾಹನಗಳು ಅಂದರೆ ಯೆಲ್ಲೋ ಬೋರ್ಡ್​ನ ಟ್ಯಾಕ್ಸಿಗಳು, ಕ್ಯಾಬ್​ಗಳು, ಖಾಸಗಿ ಬಸ್​ಗಳು, ನ್ಯಾಷನಲ್ ಪರ್ವಿುಟ್ ಹೊಂದಿರುವ ಗೂಡ್ಸ್ ವಾಹನಗಳಿಗೆ ಈ ಆದೇಶ ಅನ್ವಯವಾಗಲಿದ್ದು, ವೆಹಿಕಲ್ ಲೋಕೇಷನ್ ಟ್ರ್ಯಾಕಿಂಗ್‌ ಡಿವೈಸ್ (ವಿಎಲ್​ಟಿ) ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್ (emergency panic button installation )ಅಳವಡಿಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮುಖ್ಯವಾಗಿ ರಾಜ್ಯದಲ್ಲಿ ಮಹಿಳೆಯರು, ಮಕ್ಕಳು ಹಾಗೂ ಪ್ರಯಾಣಿಕರ ಸುರಕ್ಷತೆಗಾಗಿ ಸಾರ್ವಜನಿಕ ಸೇವೆ ಇರುವ ಖಾಸಗಿ ವಾಹನಗಳಿಗೆ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಸುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಕೆಲಸ ಶೀಘ್ರವಾಗಿ ಆಗಬೇಕಿರುವುದರಿಂದ ಆರ್​ಟಿಒಗಳಲ್ಲಿ ಈ ಯೋಜನೆಗೆ ಒಳಪಡುವ ವಾಹನಗಳಿಗೆ ಮಾತ್ರ ಎಫ್.ಸಿ ನವೀಕರಣಕ್ಕೆ ಸೂಚನೆ ನೀಡಲಾಗಿದೆ.

Advertisement

ಸದ್ಯ ಕೇಂದ್ರ ಹಾಗೂ ರಾಜ್ಯ ಸರ್ಕಾರದ 60:40 ಅನುಪಾತದ ಸಹಭಾಗಿತ್ವದಲ್ಲಿ ಸಾರ್ವಜನಿಕ ಸೇವಾ ವಾಹನಗಳಲ್ಲಿ ಈ ಡಿವೈಸ್ ಅಳವಡಿಕೆಗೆ ಒಪ್ಪಿಗೆ ನೀಡಲಾಗಿದೆ. ಈ ಯೋಜನೆ ಜಾರಿಗೆ 2035.90 ಲಕ್ಷಗಳ ವೆಚ್ಚಕ್ಕೆ ಅನುಮೋದನೆ ನೀಡಲಾಗಿದ್ದು, ವಾಹನ ಮಾಲೀಕರು ಅರ್ಹ ಕಂಪನಿಗಳಿಂದ ಪ್ಯಾನಿಕ್ ಬಟನ್ ಅಳವಡಿಸಬೇಕು ಎಂದು ತಿಳಿಸಲಾಗಿದೆ.

ಡಿಸೆಂಬರ್ 1 ರಿಂದಲೇ ಈ ಯೋಜನೆ ಪ್ರಾರಂಭವಾಗಲಿದೆ. ಒಂದು ವರ್ಷದೊಳಗೆ(30/11/24 ) ಪರ್ಮಿಟ್ ವಾಹನಗಳು ಈ ಸಾಧನಗಳನ್ನ ಅಳವಡಿಸಿರಬೇಕು. ಇಲ್ಲವಾದಲ್ಲಿ ಸಾರಿಗೆ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೇ ಡಿವೈಸ್ ಅಳವಡಿಕೆ ಮಾಡದಿದ್ದರೆ ಎಫ್ ಸಿ ನವೀಕರಣವಾಗಲ್ಲ ಎಂದು ರಾಜ್ಯ ಸಾರಿಗೆ ಇಲಾಖೆ ಆದೇಶದಲ್ಲಿ ಉಲ್ಲೇಖಿಸಿದೆ. ಮುಖ್ಯವಾಗಿ ಪ್ಯಾನಿಕ್ ಬಟನ್ ಒಳಗೊಂಡ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಡಿವೈಸ್ ಅಳವಡಿಸಲು 7,599 ರೂಪಾಯಿ ನಿಗದಿ ಮಾಡಲಾಗಿದೆ. ಜಿಎಸ್‌ಟಿ ಹೊರತುಪಡಿಸಿ ಈ ಬೆಲೆಯನ್ನು ನಿಗದಿ ಮಾಡಲಾಗಿದೆ.

ವಿಎಲ್​ಟಿ ಹಾಗೂ ಪ್ಯಾನಿಕ್ ಬಟನ್ ಅಳವಡಿಕೆಯ ನಂತರ ಮಾನಿಟರಿಂಗ್ ನಕ್ಷೆಯಲ್ಲಿ ವಾಹನದ ಲೊಕೇಷನ್‌ ಟ್ರ್ಯಾಕಿಂಗ್‌ ಆರಂಭವಾಗುತ್ತದೆ. ಇದು ನಿರ್ಬಂಧಿತ ಪ್ರದೇಶ, ಸಂಚಾರ ನಿಯಮಗಳ ಉಲ್ಲಂಘನೆ ಹಾಗೂ ಅತಿ ವೇಗದ ಎಚ್ಚರಿಕೆ ಕೂಡ ಕೊಡಲಿದೆ. ಅಲ್ಲದೇ ಆರೋಗ್ಯದಲ್ಲಿ ಏರುಪೇರು, ಲೈಂಗಿಕ ದೌರ್ಜನ್ಯ, ದರೋಡೆ ಸೇರಿದಂತೆ ಯಾವುದೇ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪ್ಯಾನಿಕ್ ಬಟನ್ ಒತ್ತಿದರೆ ಕಮಾಂಡ್ ಸೆಂಟರ್​ಗೆ ಎಚ್ಚರಿಕೆ ಸಂದೇಶ ರವಾನೆಯಾಗುತ್ತದೆ. ಇದರಿಂದ ಕಮಾಂಡ್ ಸೆಂಟರ್ ವಾಹನದ ಲೊಕೇಷನ್‌ ಸಮೇತವಾಗಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಿದ್ದು ಇದರಿಂದ ಸಂಭವಿಸಬಹುದಾದ ಅಪಾಯ ತಡೆಯಬಹುದಾಗಿದೆ.

ಇದನ್ನೂ ಓದಿ: ಗೃಹಲಕ್ಷ್ಮೀಯ ಬರೋಬ್ಬರಿ 59 ಕಂತಿನ ಹಣವನ್ನೂ ಒಬ್ಬರಿಗೇ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್- ಯಾರಿಗೆ, ಯಾಕಾಗಿ ಗೊತ್ತಾ ?!

Related News

Advertisement
Advertisement