For the best experience, open
https://m.hosakannada.com
on your mobile browser.
Advertisement

Gruhalakshmi Scheme Update: ಬೆಳ್ಳಂಬೆಳಗ್ಗೆಯೇ 'ಗೃಹಲಕ್ಷ್ಮೀ'ಯರಿಗೆ ಶುಭ ಸುದ್ದಿ- ರಾಜ್ಯ ಸರ್ಕಾರದಿಂದ ಮತ್ತೊಂದು ಹೊಸ ಘೋಷಣೆ

10:33 AM Dec 23, 2023 IST | ಕಾವ್ಯ ವಾಣಿ
UpdateAt: 11:16 AM Dec 23, 2023 IST
gruhalakshmi scheme update  ಬೆಳ್ಳಂಬೆಳಗ್ಗೆಯೇ  ಗೃಹಲಕ್ಷ್ಮೀ ಯರಿಗೆ ಶುಭ ಸುದ್ದಿ  ರಾಜ್ಯ ಸರ್ಕಾರದಿಂದ ಮತ್ತೊಂದು ಹೊಸ ಘೋಷಣೆ
Advertisement

Gruhalakshmi Scheme Update: ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮೀ ಗ್ಯಾರಂಟಿ ಯೋಜನೆಯಡಿ, ಬ್ಯಾಂಕ್ ಇದೂವರೆಗೆ ಪಾವತಿ ಮಾಡಿಕೊಂಡ ಹಣ ವಾಪಸ್ ಫಲಾನುಭವಿಗಳ ಖಾತೆಗೆ ವರ್ಗಾಯಿಸಲು ಕ್ರಮವಹಿಸಿ ಎಂದು ಖಡಕ್ ಸೂಚನೆನ್ನು ಲೀಡ್ ಬ್ಯಾಂಕ್ ಮ್ಯಾನೇಜರ್ ಸದಾಶಿವ ರಾತ್ರಿಕರ್ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದಾರೆ.

Advertisement

ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮೀ ಯೋಜನೆಯಡಿ ಮಾಸಿಕ ನೀಡಲಾಗುವ 2,000 ರು. ಹಣ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಕಾರಣ ಬ್ಯಾಂಕ್ ಅಧಿಕಾರಿಗಳು ಈ ಹಣವನ್ನು ಫಲಾನುಭವಿ ಸಾಲದ ವಸೂಲಾತಿಗೆ ಬಳಕೆ ಮಾಡುತ್ತಿರುವ ಕ್ರಮ ಸರಿಯಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: Koragajja: ಕೊರಗಜ್ಜನ ಪವಾಡ; ಕೊಟ್ಟ ಮಾತು ತಪ್ಪದ ಅಜ್ಜ, ಗಿಡ ನೆಟ್ಟು ತೋರಿಸಿದ ಕೊರಗ ತನಿಯ!

Advertisement

ಸಚಿವ ಪ್ರಿಯಾಂಕ್ ಖರ್ಗೆ ಅವರು, ಗ್ಯಾರಂಟಿ ಯೋಜನೆಯಡಿ ಇದೂವರೆಗೆ ಪಾವತಿ ಮಾಡಿಕೊಂಡ ಹಣ ವಾಪಸ್ ಫಲಾನುಭವಿಗಳ ಖಾತೆಗೆ ವರ್ಗಾಯಿಸಲು ಕ್ರಮವಹಿಸಿ ಎಂದು ಲೀಡ್ ಬ್ಯಾಂಕ್ ಮ್ಯಾನೇಜರ್ ಸದಾಶಿವ ರಾತ್ರಿಕರ್ ಅವರಿಗೆ ಖಡಕ್ ಸೂಚನೆ ನೀಡುವ ಜೊತೆಗೆ, ಬ್ಯಾಂಕ್ ನವರು ಬಡವರು, ದಲಿತರು ಬ್ಯಾಂಕ್ ಗೆ ಬಂದರೆ ಅಮಾನವೀಯವಾಗಿ ವರ್ತಿಸುತ್ತಾರೆ. ಈ ಪರಿಸ್ಥಿತಿ ಬದಲಾಗಬೇಕು ಎಂದು ಆಗ್ರಹಿಸಿದರು.

Advertisement
Advertisement
Advertisement