Karnataka politics: ರಾಜ್ಯ ಬಿಜೆಪಿಗೆ ಬಿಗ್ ಶಾಕ್ - ಇಬ್ಬರು ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಡೇಟ್ ಫಿಕ್ಸ್!!
Karnataka politics: ಲೋಕಸಭಾ ಚುನಾವಣೆ ವೇಳೆ ರಾಜ್ಯ ಬಿಜೆಪಿಗೆ ದೊಡ್ಡ ಆಘಾತ ಎದುರಾಗಿದೆ. ಇಬ್ಬರು ಹಾಲಿ ಶಾಸಕರು ಕಾಂಗ್ರೆಸ್ ಸೇರಲು ತಯಾರಿ ನಡೆಸುತ್ತಿದ್ದು, ಡೇಟ್ ಕೂಡ ಫಿಕ್ಸ್ ಆಗಿದೆ ಎನ್ನಲಾಗುತ್ತಿದೆ.
ಹೌದು, ದೇಶದಲ್ಲಿ ಬಿಜೆಪಿ, ಮೋದಿ ಅಲೆ ಇದ್ದರೂ ರಾಜ್ಯದಲ್ಲಿ , ಗ್ಯಾರಂಟಿ ಯೋಜನೆ ಬಳಿಕ ಕಾಂಗ್ರೆಸ್ ಪರ ಅಲೆ ಇದೆ ಎನ್ನುವ ಲೆಕ್ಕಾಚಾರದೊಂದಿಗೆ ಇಬ್ಬರು ಬಿಜೆಪಿಯ ಪ್ರಮುಖ ಶಾಸಕರು ಕಾಂಗ್ರೆಸ್‌ಗೆ ವಾಪಸ್ ಮರಳಲು ಪ್ಲಾನ್ ಮಾಡಿದ್ದಾರೆ. ಅಲ್ಲದೆ ಬಿಜೆಪಿ(BJP) ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ(BY Vijayendra)ಕೂಡ ಅವರಿಬ್ಬರ ಮನವೊಲಿಸಲು ಯತ್ನಿಸಿದ್ದು, ಏನೂ ಪ್ರಯೋಜನ ಆಗಿಲ್ಲ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಸೇರಲು ಮುಂದಾದ ಶಾಸಕರು ಯಾರು?
ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್(Shivram hebbar) ಮತ್ತು ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್(ST Somshekhar) ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ದಿನಾಂಕ ನಿಗದಿ ಮಾಡಿದ್ದಾರೆ. ಸದ್ಯದಲ್ಲೇ ರಾಜ್ಯ ರಾಜಕೀಯದಲ್ಲಿ(karnataka politics) ಮಹಾನ್ ಬೆಳವಣಿಗೆ ನಡೆಯಲಿದೆ.