For the best experience, open
https://m.hosakannada.com
on your mobile browser.
Advertisement

Karnataka Rain: ಇಂದಿನಿಂದ ಮಳೆಯ ಸಿಂಚನ: ಗುಡುಗು ಮಿಂಚು ಸಹಿತ ಮಳೆ

Karnataka Rain: 1 ವಾರ ಗುಡುಗು, ಮಿಂಚು ಸಹಿತ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
08:37 AM Apr 11, 2024 IST | ಸುದರ್ಶನ್
UpdateAt: 09:09 AM Apr 11, 2024 IST
karnataka rain  ಇಂದಿನಿಂದ ಮಳೆಯ ಸಿಂಚನ  ಗುಡುಗು ಮಿಂಚು ಸಹಿತ ಮಳೆ
Advertisement

Karnataka Rain: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುರುವಾರದಿಂದ 1 ವಾರ ಗುಡುಗು, ಮಿಂಚು ಸಹಿತ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಇದನ್ನೂ ಓದಿ: Crime News: ಅತ್ತೆ ಮಾವನ ಮೇಲಿನ ಕೋಪಕ್ಕೆ ಕೊಡಲಿ ಎತ್ತಿಕೊಂಡು ಹೊರಟ ಸೊಸೆ, ಅಡಿಕೆ ಮರಗಳೆಲ್ಲ ಕಟ್ ಕಟ್ !

ಮಾ.11ರಂದು ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಾದ ಕೊಡಗು, ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಯಾದಗಿರಿ, ರಾಯಚೂರು, ಗದಗ, ಹಾವೇರಿ, ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ ಮತ್ತು ಹಾಸನ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

Advertisement

ಇದನ್ನೂ ಓದಿ: Bramhanda Guruji: ಮೋದಿ ಎರಡು ವರ್ಷ ಮಾತ್ರ ದೇಶದ ಪ್ರಧಾನಿ, ಗೆದ್ದರೂ ಹುದ್ದೆಗೆ ರಾಜೀನಾಮೆ - ಬ್ರಹ್ಮಾಂಡ ಗುರೂಜಿ ಸ್ಪೋಟಕ ಭವಿಷ್ಯ !!

ಮಾ.12ರಂದು ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಯಾದಗಿರಿ, ರಾಯಚೂರು, ಗದಗ, ಕೊಪ್ಪಳ, ಕೊಡಗು, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ ಹಾಸನ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ವಿಜಯನಗರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ.

ಮಾ.13ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ, ಬಾಗಲಕೋಟೆ, ಗದಗ, ಕೊಡಗು, ಮೈಸೂರು, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ ಹಾಸನ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ವಿಜಯನಗರ ಮತ್ತು ಮಂಡ್ಯ ಹಾಗೂ ಮಾ. 14ರಂದು ದಕ್ಷಿಣ ಕನ್ನಡ, ಉಡುಪಿ, ಕಲಬುರಗಿ, ರಾಯಚೂರು, ವಿಜಯಪುರ, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಮಾ.15ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಗದಗ, ಧಾರವಾಡ, ಚಿಕ್ಕಮಗಳೂರು, ಕೊಡಗು, ಹಾಸನ, ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement
Advertisement
Advertisement