For the best experience, open
https://m.hosakannada.com
on your mobile browser.
Advertisement

Karnataka Weather: ದಕ್ಷಿಣ ಒಳನಾಡಿನಲ್ಲಿ ಮಳೆ ಸಂಭವ; ಉಳಿದೆಲ್ಲ ಕಡೆ ರಣಬಿಸಿಲು

Karnataka Weather: ರಾಜ್ಯದಲ್ಲಿ ಬಿಸಿಗಾಳಿ ಎಚ್ಚರಿಕೆ ನಡುವೆಯೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
07:45 AM May 01, 2024 IST | ಸುದರ್ಶನ್
UpdateAt: 07:47 AM May 01, 2024 IST
karnataka weather  ದಕ್ಷಿಣ ಒಳನಾಡಿನಲ್ಲಿ ಮಳೆ ಸಂಭವ  ಉಳಿದೆಲ್ಲ ಕಡೆ ರಣಬಿಸಿಲು
Advertisement

Karnataka Weather: ರಾಜ್ಯದಲ್ಲಿ ಬಿಸಿಗಾಳಿ ಎಚ್ಚರಿಕೆ ನಡುವೆಯೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 1 ರಂದು ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಇದನ್ನೂ ಓದಿ:  Prajwal Revanna: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯದ ಕುರಿತು ಪೂನಂ ಕೌರ್ ಸೆನ್ಸೆಷನಲ್ ವಿಡಿಯೋ : ಕೈ ಮುಗಿತೀನಿ ಅವನನ್ನು ಮಾತ್ರ ಬಿಡಬೇಡಿ

ಈ ನಡುವೆ ಬುಧವಾರ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬಳ್ಳಾರಿ, ಹಾಸನ (ಬಯಲು ಪ್ರದೇಶ), ಚಾಮರಾಜನಗರ, ಬೆಂಗಳೂರು ನಗರ. ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು (ಬಯಲು ಪ್ರದೇಶ) ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಉಷ್ಣ ಮಾರುತ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement

ಇದನ್ನೂ ಓದಿ:  Health Care: ಕೈ ಯಿಂದ ಆಹಾರವನ್ನು ತಿಂದರೆ ಒಳ್ಳೆಯದ? ಅಥವಾ ಚಮಚದಿಂದನಾ? ಇಲ್ಲಿದೆ ಹೆಲ್ತ್ ಟಿಪ್ಸ್

Advertisement
Advertisement
Advertisement