Karnataka Weather: ಕರಾವಳಿಯಲ್ಲಿ ಗುಡುಗು ಸಹಿತ ಮಳೆಯ ಸಂಭವ
Karnataka Weather: ದಕ್ಷಿಣಕನ್ನಡ, ಉಡುಪಿ ಸೇರಿ ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಗುಡುಗು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: Death News: ಜನ್ಮದಿನದ ಮುನ್ನಾ ದಿನವೇ ಹಾರಿಹೋಯ್ತು ಪ್ರಾಣ; ಮಳೆ ಎಂದು ಕಾರಿನಲ್ಲಿ ಕೂತ, ಮರ ಕಾರಿನ ಮೇಲೆ ಬಿತ್ತು
ಮೇ 7ರಂದು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿ ಗಾಳಿ ಜತೆಗೆ ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಯಿದೆ ಎಂದು ಆರೆಂಜ್ ಅಲರ್ಟ್ ಘೋಷಿಸಿದೆ. ದ.ಕ. ಜಿಲ್ಲೆಯಲ್ಲಿ ಭಾನುವಾರ ಸರಾಸರಿ 33.7 ಡಿಗ್ರಿ ಸೆಲ್ಸಿ ಯಸ್ ಗರಿಷ್ಠ 26.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದ್ದು, ಸಂಜೆ 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿರುವುದರಿಂದ ರಾತ್ರಿ ಒಣ ಚಳಿ ಮುಂದುವರಿದಿತ್ತು.
ಇದನ್ನೂ ಓದಿ: Prajwal Revanna Video: ಪ್ರಜ್ವಲ್ ರೇವಣ್ಣ ವಿಡಿಯೋ ಇರೋದು ಕೇವಲ 2 ಗಂಟೆ 37 ನಿಮಿಷ ಮಾತ್ರ , ಉಳಿದದ್ದೆಲ್ಲ ಮಿಕ್ಸಿಂಗ್ !!
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಕಂಡು ಬಂದಿದ್ದು, ಮುಂದಿನ 1-2 ದಿನ ರಾತ್ರಿ ವೇಳೆ ಚಳಿಯ ತೀವ್ರತೆ ಸಾಧಾರಣಕ್ಕಿಂತ ತುಸು ಹೆಚ್ಚಾಗಲಿದೆ ಎಂದು ರಾಷ್ಟ್ರೀಯ ಹವಾಮಾನ ಮನ್ಸೂಚನಾ ಕೇಂದ್ರ ಮಾಹಿತಿ ನೀಡಿದೆ.
ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಂಗಳವಾರದಿಂದ ಮೂರು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಗಳವಾರ ಬೆಂಗಳೂರು ನಗರ, ಬೆಂಗಳೂರು ಗ್ರಾ., ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಕೊಡಗು, ಮೈಸೂರು, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,
ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ನೀಡಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ ಇದೆ.
ಮೇ 8ರಂದು ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗುವ ಸಂಭವವಿದೆ.
ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಹಗುರ ಮಳೆಯಾಗಲಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.