Karnataka Weather: ಮತ್ತೆ ರಜೆ ಹಾಕಿದ ಮಳೆರಾಯ - ಇನ್ಯಾವಾಗ ಪ್ರತ್ಯಕ್ಷ ಆಗ್ತಾನೆ ಗೊತ್ತಾ ?!
Karnataka Weather: ರಾಜ್ಯಾದ್ಯಂತ ಕೆಲವು ದಿನದಿಂದ ಚಳಿ ತೀವ್ರತೆ ಹೆಚ್ಚಾಗಿದೆ. ಇನ್ನು ಮಳೆರಾಯ ಕಳೆದೊಂದು ವಾರದಿಂದ ಕಾಣೆಯಾಗಿದ್ದಾನೆ. ಆದರೆ ವಾತಾವರಣ (Karnataka Weather Forecast) ಇಂದು ಬದಲಾಗಿದೆ. ರಾಜ್ಯದಲ್ಲಿ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಬಹುತೇಕ ಜಿಲ್ಲೆಗಳಲ್ಲಿ ಒಣಹವೆಯೇ ಮುಂದುವರಿಯಲಿದೆ.
ಮುಖ್ಯವಾಗಿ ಬೆಂಗಳೂರಿನ ಸುತ್ತಮುತ್ತ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 20 ಡಿ.ಸೆ ಇರಲಿದೆ.
ಮಾಹಿತಿ ಪ್ರಕಾರ, ನವೆಂಬರ್ 30ರವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯ ಅಲ್ಲಲ್ಲಿ ಅತ್ಯಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿಯಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸೂಚನೆ ಇದೆ. ಉಳಿದಂತೆ ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಬಾಗಲಕೋಟೆಯಲ್ಲಿ ಒಣಹವೆ ಇರಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ರಾಮನಗರ, ಶಿವಮೊಗ್ಗದಲ್ಲಿ ಮಳೆಯ ಸಿಂಚನವಾದರೆ, ತುಮಕೂರು, ವಿಜಯನಗರ ಬಳ್ಳಾರಿ, ಚಾಮರಾಜನಗರ, ಮೈಸೂರು, ಮಂಡ್ಯದಲ್ಲಿ ಒಣಹವೆ ಮೇಲುಗೈ ಸಾಧಿಸಲಿದೆ.
ಉಳಿದಂತೆ ಉತ್ತರ ಒಳನಾಡಲ್ಲಿ ಒಣಹವೆ ಇತ್ತು. ಶಿವಮೊಗ್ಗದ ತಾಳಗುಪ್ಪದಲ್ಲಿ 4, ತುಮಕೂರಿನ ಗುಬ್ಬಿ, ಹಾಸನದ ಕೊಣನೂರು, ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ವಿಜಯಪುರದಲ್ಲಿ ಕನಿಷ್ಠ ಉಷ್ಣಾಂಶ 17.1 ಡಿ.ಸೆ ದಾಖಲಾಗಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ:28 ಡಿ.ಸೆ-18 ಡಿ.ಸೆ
ಮಂಗಳೂರು: 33 ಡಿ.ಸೆ - 24 ಡಿ.ಸೆ
ಚಿತ್ರದುರ್ಗ: 30 ಡಿ.ಸೆ - 19ಡಿ.ಸೆ
ಗದಗ: 32 ಡಿ.ಸೆ - 21 ಡಿ.ಸೆ
ಹೊನ್ನಾವರ: 36 ಡಿ.ಸೆ- 23 ಡಿ.ಸೆ
ಕಲಬುರಗಿ: 33 ಡಿ.ಸೆ - 21 ಡಿ.ಸೆ
ಬೆಳಗಾವಿ: 29 ಡಿ.ಸೆ - 17 ಡಿ.ಸೆ
ಕಾರವಾರ: 36 ಡಿ.ಸೆ - 25 ಡಿ.ಸೆ.
ಇದನ್ನೂ ಓದಿ: ಗೃಹಲಕ್ಷ್ಮೀ ಹಣ ಬರದವರಿಗೆ ಮಹತ್ವದ ಸುದ್ದಿ- ಈ ಕೆಲಸ ಮಾಡಲು ರೆಡಿಯಾಗಿ