KPSC: ಇಂದಿನಿಂದ ಶುರುವಾಗಲಿದೆ KPSC ಗ್ರೂಪ್ 'ಸಿ' ಹುದ್ದೆಗಳ ಪರೀಕ್ಷೆ - ಅಭ್ಯರ್ಥಿಗಳೇ ಹೆಚ್ಚಿನ ಮಾಹಿತಿಗಾಗಿ ತಪ್ಪದೇ ಈ ಸ್ಟೋರಿ ನೋಡಿ
KPSC Exams : ಕೆಪಿಎಸ್‍ಸಿ (KPSC)ವತಿಯಿಂದ ವಿವಿಧ ಇಲಾಖೆಗಳಲ್ಲಿನ ಗ್ರೂಪ್-ಸಿ ಹುದ್ದೆಗಳಿಗೆ ಡಿಸೆಂಬರ್ 16 ಹಾಗೂ 17 ರಂದು ಸ್ಪರ್ಧಾತ್ಮಕ ಪರೀಕ್ಷೆಯ ನಡೆಯುವ ನಿಟ್ಟಿನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.
ಪರೀಕ್ಷೆಯಲ್ಲಿ (Exams)ಭಾಗಿಯಾಗುವ ಎಲ್ಲಾ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಸ್ಮಾರ್ಟ್ ವಾಚ್, ಮೊಬೈಲ್, ಕ್ಯಾಲ್ಕ್ಯುಲೇಟರ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಒಯ್ಯಲು ಅವಕಾಶವಿಲ್ಲ. ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಲಾದ ಅಧಿಕಾರಿಗಳು, ಮೇಲ್ವಿಚಾರಕರು ಪರೀಕ್ಷಾ ಕೇಂದ್ರಗಳಲ್ಲಿ ಒಂದು ಗಂಟೆ ಮುಂಚಿತವಾಗಿ ಹಾಜರಿರತಕ್ಕದ್ದು. ಇದರ ಜೊತೆಗೆ ಪ್ರಶ್ನೆಪತ್ರಿಕೆ ಮತ್ತು ಓಎಂಆರ್ ಶೀಟ್‍ಗಳನ್ನು ಸರಿಯಾದ ಸಮಯಕ್ಕೆ ಪರೀಕ್ಷಾರ್ಥಿಗಳಿಗೆ ವಿತರಣೆ ಮಾಡಬೇಕು. ಪರೀಕ್ಷಾ ಸಮಯದಲ್ಲಿ ಮೇಲ್ವಿಚಾರಕರು ಮೊಬೈಲ್ ಬಳಸದಂತೆ ಸೂಚನೆ ನೀಡಲಾಗಿದೆ.ಇದರ ಜೊತೆಗೆ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಮತ್ತು ಕೇಂದ್ರದ ಸುತ್ತಮುತ್ತಲ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ