ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

KSET Exam; ಪರೀಕ್ಷಾ ಅಭ್ಯರ್ಥಿಗಳಿಗೆ ಪ್ರಮುಖ ಸೂಚನೆ, ಈ ನಿಯಮಗಳ ಪಾಲನೆ ಕಡ್ಡಾಯ!!!

05:32 PM Jan 03, 2024 IST | ಮಲ್ಲಿಕಾ ಪುತ್ರನ್
UpdateAt: 05:33 PM Jan 03, 2024 IST
Advertisement

KSET Exam: ಕೆ-ಸೆಟ್‌ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು https://cetonline.karnataka.gov.in/kea/ ಜಾಲತಾಣಕ್ಕೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್ಲೋಡ್‌ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಬುಧವಾರ ತಿಳಿಸಿದ್ದಾರೆ.

Advertisement

ಅಭ್ಯರ್ಥಿಗಳು ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವ ಮುನ್ನ ಪ್ರವೇಶಪತ್ರ ಮತ್ತು ಸರಕಾರದಿಂದ ಮಾನ್ಯವಾಗಿರುವ ನಿಗದಿತ ಬಗೆಯ ಗುರುತಿನ ಪತ್ರವನ್ನು ತೋರಿಸುವುದು ಕಡ್ಡಾಯವಾಗಿದೆ ಎಂದು ಪತ್ರಿಕಾ ಪ್ರಕಟನೆ ತಿಳಿಸಿದೆ. ಎರಡು ಭಾವಚಿತ್ರಗಳನ್ನು ತರಬೇಕು, ಪ್ರವೇಶ ಪತ್ರದಲ್ಲಿ ನಮೂದಿಸಿರುವ ಪರೀಕ್ಷಾ ಕೇಂದ್ರದಲ್ಲಷ್ಟೇ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಬೇಕು ಎಂದು ಹೇಳಿದ್ದಾರೆ.

ಬೆಳಗ್ಗೆ 10 ರಿಂದ 11 ಮತ್ತು ಮಧ್ಯಾಹ್ನ 12ರಿಂದ 2 ಗಂಟೆಯವರೆಗೆ ನಡೆಯಲಿದೆ. ಈ ನಡುವೆ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಿಂದ ಹೊರ ಹೋಗಲು ಅವಕಾಶ ಇಲ್ಲ. ಓಎಂಆರ್‌ ಶೀಟ್‌ ಮೇಲೆ ನೋಂದಣಿ ಸಂಖ್ಯೆ, ವಿಷಯದ ಕೋಡ್‌, ಪರೀಕ್ಷಾ ಕೇಂದ್ರದ ಕೋಡ್‌ಗಳನ್ನೇನಾದರೂ ತಪ್ಪಾಗಿ ಬರೆದಿದ್ದಲ್ಲಿ, ಅಂತಹ ಅಭ್ಯರ್ಥಿಗಳ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಲಾಗುವುದಿಲ್ಲ ಎಂದು ಹೇಳಲಾಗಿದೆ.

Advertisement

ವಸ್ತ್ರ ಸಂಹಿತೆ: ಪುರುಷ ಅಭ್ಯರ್ಥಿಗಳು ಅರೆತೋಳಿನ ಅಂಗಿ, ಹೆಚ್ಚಿನ ಜೇಬುಗಳಿಲ್ಲದ ಸರಳ ಪ್ಯಾಂಟ್‌ ಕಡ್ಡಾಯ. ಜಿಪ್‌ ಪಾಕೆಟ್‌, ದೊಡ್ಡ ಬಟನ್ಸ್‌ ಮತ್ತು ವಿಸ್ತಾರ ಕಸೂತಿ ಇರುವ ಉಡುಪು ಮತ್ತು ಶೂಗಳನ್ನು ನಿಷೇಧ ಮಾಡಲಾಗಿದೆ. ಕಂಠಾಭರಣ, ಕಿವಿಯೋಲೆ, ಉಂಗುರು, ಕಡಗಗಳನ್ನು ಧರಿಸಿಕೊಂಡು ಬರಬಾರದು ಎಂದು ಪ್ರಾಧಿಕಾರ ಕಟ್ಟುನಿಟ್ಟಾಗಿ ಹೇಳಿದೆ.

ಮಹಿಳಾ ಅಭ್ಯರ್ಥಿಗಳಿಗೆ ವಿಪರೀತ ಕಸೂತಿ, ಹೂಗಳು, ಬ್ರೂಚ್‌, ಬಟನ್‌, ಪೂರ್ಣ ತೋಳಿನ ರವಿಕೆ/ವಸ್ತ್ರ ಇರುವ ಉಡುಪು ಮತ್ತು ಜೀನ್ಸ್‌ ಪ್ಯಾಂಟ್‌ ಹಾಗೂ ದಪ್ಪನೆ ಅಡಿಭಾಗವಿರುವ ಚಪ್ಪಲಿ/ಶೂ ಗಳಿಗೆ ನಿಷೇಧ ಹೇರಲಾಗಿದೆ. ಮಂಗಳಸೂತ್ರ, ಕಾಲುಂಗುರ ಹೊರತುಪಡಿಸಿ ಬೇರಾವುದೇ ಆಭರಣಗಳನ್ನು ಹಾಕಿಕೊಂಡು ಪರೀಕ್ಷಾ ಕೇಂದ್ರಕ್ಕೆ ಬರಲು ಅವಕಾಶವಿಲ್ಲ ಎಂದು ರಮ್ಯಾ ಅವರು ಹೇಳಿದ್ದಾರೆ.

ನಿಷೇಧಿತ ವಸ್ತುಗಳು; ಟೋಪಿ, ಮಾಸ್ಕ್‌ ಹಾಕಿಕೊಂಡು ಬರುವಂತಿಲ್ಲ. ಬ್ಲೂಟೂತ್‌, ಮೊಬೈಲ್‌ ಫೋನ್‌, ಎಲೆಕ್ಟ್ರಾನಿಕ್‌ ವಸ್ತುಗಳು, ಪೆನ್‌ಡ್ರೈವ್‌, ಇಯರ್‌ಫೋನ್‌, ಕೈ ಗಡಿಯಅರ. ಪೆನ್ಸಿಲ್‌ ಎರೇಸರ್‌, ಲಾಗ್‌ ಟೇಬಲ್‌, ಜಾಮಿಟ್ರಿ ಪೆಟ್ಟಿಗೆ ಇತ್ಯಾದಿಗಳಿಗೆ ನಿಷೇಧ ಹೇರಲಾಗಿದೆ.

Related News

Advertisement
Advertisement