For the best experience, open
https://m.hosakannada.com
on your mobile browser.
Advertisement

Kumki Land: ಕುಮ್ಕಿ ಜಮೀನು ಮಂಜೂರು ಮಾಡಲು ಸಾಧ್ಯವಿಲ್ಲ: ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ

Kumki Land: ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆಯೂ ಅಸಾಧ್ಯ. ಹೀಗಾಗಿ ಅಂತಹ ಪ್ರಕರಣವನ್ನು ಸರ್ಕಾರ ವಿಶೇಷ ದೃಷ್ಟಿಯಿಂದಲೇ ನೋಡಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
01:28 PM Jul 23, 2024 IST | ಕಾವ್ಯ ವಾಣಿ
UpdateAt: 01:36 PM Jul 23, 2024 IST
kumki land  ಕುಮ್ಕಿ ಜಮೀನು ಮಂಜೂರು ಮಾಡಲು ಸಾಧ್ಯವಿಲ್ಲ  ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ
Advertisement

Kumki Land: ಸಚಿವ ಕೃಷ್ಣ ಬೈರೇಗೌಡ ಅವರು, ಕಾನೂನಿನ ಪ್ರಕಾರ ಕುಮ್ಕಿ ಜಮೀನನ್ನು ಮಂಜೂರು ಮಾಡಲು ಸಾಧ್ಯವಿಲ್ಲ ಸ್ಪಷ್ಟನೆ ನೀಡುವ ಜೊತೆಗೆ, ಒಂದು ವೇಳೆ ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆಯೂ ಅಸಾಧ್ಯ. ಹೀಗಾಗಿ ಅಂತಹ ಪ್ರಕರಣವನ್ನು ಸರ್ಕಾರ ವಿಶೇಷ ದೃಷ್ಟಿಯಿಂದಲೇ ನೋಡಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Advertisement

Budget 2024: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ ಮಾಡುವ ಈ ಟ್ಯಾಬ್‌ ಯಾವುದು? ಬೆಲೆ ಎಷ್ಟು?

ಈಗಾಗಲೇ ವಿಧಾನಸಭಾ ಅಧಿವೇಶನದಲ್ಲಿ ಸೋಮವಾರ ಬಿಜೆಪಿ ನಾಯಕ ವಿ. ಸುನೀಲ್ ಕುಮಾ‌ರ್ ಕುಮ್ಕಿ ಜಮೀನಿನ (Kumki Land) ಸಮಸ್ಯೆಗಳಿಗೆ ಸಂಬಂಧಿಸಿದ ಪ್ರಶ್ನೆಯೊಂದನ್ನು ಕೇಳಿದ್ದರು. "ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕುಮ್ಕಿ ಜಮೀನಿನ ಸಮಸ್ಯೆ ಎದುರಾಗಿದೆ, ಸ್ವಾಧೀನದಲ್ಲಿರುವ ಕುಮ್ಕಿ ಜಮೀನಿನನ್ನು ಕಲಂ ನಮೂನೆ 53- 57 ಹಾಗು 93 ಸಿಸಿ ಪ್ರಕಾರ ಮಂಜೂರು ಮಾಡಬೇಕು” ಎಂದು ಕೇಳಿಕೊಂಡಿದ್ದಾರೆ.

Advertisement

ಆ ಸಂದರ್ಭದಲ್ಲಿ ಕುಮ್ಕಿ ಜಮೀನಿನ ಮಂಜೂರಿಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಕಾನೂನಿನ ನಿಯಮ ಪ್ರಕಾರ ಕುಮ್ಕಿ ಜಮೀನನ್ನು ಯಾರಿಗೂ ಮಂಜೂರು ಮಾಡುವುದು ಸಾಧ್ಯವಿಲ್ಲ. ಆಗುತ್ತೆ, ಎಂದು ಜನರಿಗೆ ತಪ್ಪು ಮಾಹಿತಿ ಅಥವಾ ತಪ್ಪು ಭರವಸೆ ನೀಡಲು ನಾವು ಸಿದ್ದರಿಲ್ಲ. ಕುಮ್ಕಿ ಜಮೀನನ್ನು ಮಂಜೂರು ಮಾಡಲು ಸಾಧ್ಯವಿಲ್ಲ ಎಂಬುದೇ ಸತ್ಯ” ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಇನ್ನು  “ಕೆಎಲ್‌ಆರ್ ಆಕ್ಟ್ ರೂಲ್ 79ರ ಪ್ರಕಾರ ಕುಮ್ಕಿ ಪ್ರದೇಶವನ್ನು ಉಪಯೋಗ ಮಾಡಿಕೊಳ್ಳುವ ಹಕ್ಕನ್ನು ಜನರಿಗೆ ನೀಡಲಾಗಿದೆ. ಅಂದರೆ ಜಮೀನಿಗೆ ಹೊಂದಿಕೊಂಡಿರುವ ಕಾಡಿನ ಭಾಗದ ಉಪ ಉತ್ಪನ್ನಗಳನ್ನು ಬಳಕೆ ಮಾಡಿಕೊಳ್ಳುವ ಹಕ್ಕನ್ನು ನೀಡಲಾಗಿದೆ. ಆದರೆ, ಆ ಜಾಗಗಳನ್ನು ಮಂಜೂರು ಮಾಡಲಾಗುವುದಿಲ್ಲ ಎಂದು ಕಾನೂನಿನಲ್ಲಿ ಸ್ಪಷ್ಟವಾಗಿದೆ.

Budget 2024: ಚಿನ್ನ, ಬೆಳ್ಳಿ, ಮೊಬೈಲ್ ಬೆಲೆ ಕಡಿಮೆ; ಯಾವುದು ಅಗ್ಗ ಮತ್ತು ದುಬಾರಿ ಸಂಪೂರ್ಣ ಪಟ್ಟಿ ಇಲ್ಲಿದೆ

ಇನ್ನು ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆ ಸಾಧ್ಯವಿಲ್ಲ ಎಂಬ ವಿಚಾರವನ್ನೂ ಸಚಿವ ಕೃಷ್ಣ ಬೈರೇಗೌಡ ಅವರು ಸದನದ ಗಮನಕ್ಕೆ ತಂದರು. ಯಾಕೆಂದರೆ “ಕುಮ್ಕಿ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡಿರುವ ಬಡವರ ಬಗ್ಗೆ ವಿಶೇಷ ದೃಷ್ಟಿಯಿಂದ ನೋಡುವ ಅಗತ್ಯವಿದೆ. ಗೋಮಾಳ ಜಾಗದಲ್ಲಿ 94 ಸಿಸಿ ಪ್ರಕಾರ ಮಂಜೂರು ಮಾಡದಿದ್ದರೆ, ಖಂಡಿತ ನನ್ನ ಬಳಿ ಬನ್ನಿ ಗ್ರ್ಯಾಂಟ್ ಮಾಡಿ ಕೊಡುತ್ತೇನೆ. ಆದರೆ, ಕುಮ್ಕಿ ಜಮೀನನ್ನು ಮಂಜೂರು ಮಾಡುವುದು ಸಾಧ್ಯವಿಲ್ಲ ಎಂದಿದ್ದಾರೆ.

Advertisement
Advertisement
Advertisement