ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Harish poonja: ಸಿಎಂ ವಿರುದ್ಧ ಹರೀಶ್ ಪೂಂಜ ಆಕ್ಷೇಪಾರ್ಹ ಹೇಳಿಕೆ : ಮಹತ್ವದ ಸೂಚನೆ ನೀಡಿದ ಹೈಕೋರ್ಟ್

11:40 AM Nov 20, 2023 IST | ಹೊಸ ಕನ್ನಡ
UpdateAt: 01:42 PM Nov 20, 2023 IST
Advertisement

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಮತ್ತು ಕೋಮುಭಾವನೆ ಕೆರಳಿಸುವ ಭಾಷಣ ಮಾಡಿರುವ ಆರೋಪದ ಹಿನ್ನೆಲೆ ಕ್ರಿಮಿನಲ್‌ ಪ್ರಕರಣದಲ್ಲಿ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಉಲ್ಲೇಖಿಸಿರುವ ಹೇಳಿಕೆಯ ವೀಡಿಯೋ ಸಿಡಿಯನ್ನು ಒದಗಿಸಿ ಎಂದು ಹೈಕೋರ್ಟ್‌ ಪ್ರಕರಣದ ಫಿರ್ಯಾದುದಾರರಿಗೆ ಸೂಚಿಸಿದೆ.

Advertisement

ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಆದೇಶಿಸಿದೆ. ಈ ಸಂದರ್ಭದಲ್ಲಿ ಫಿರ್ಯಾದುದಾರರ ಪರ ವಕೀಲರಾಗಿರುವ ಬಿ.ಲತೀಫ್‌, ಆಕ್ಷೇಪಣೆ ಸಲ್ಲಿಸಲು ಎರಡು ವಾರಗಳ ಸಮಯಾವಕಾಶ ಕೋರಿದ್ದಾರೆ. ಡಿ.8 ಕ್ಕೆ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ.

ಪ್ರಕರಣದ ಹಿನ್ನೆಲೆ: ಮೇ.22, 2023 ರಂದು ಬಿಜೆಪಿ ವತಿಯಿಂದ ಅಭಿನಂದನಾ ಕಾರ್ಯಕ್ರಮವನ್ನು ಬೆಳ್ತಂಗಡಿಯ ಕಿನ್ಯಮ್ಮ ಸಭಾಭವನ ಜೈನ್‌ಪಟೇಲ್‌ ಸಭಾಂಗಣದಲ್ಲಿ ಆಯೋಜನೆ ಮಾಡಲಾಗಿತ್ತು. ಈ ಸಭೆಯಲ್ಲಿ ಹರೀಶ್‌ ಪೂಂಜಾ ಅವರು ʼ ಕೋಮು ಪ್ರಚೋದಕ ಮತ್ತು ಸಂವಿಧಾನ ಬಾಹಿರ ಹೇಳಿಕೆ ನೀಡಿದ್ದಾರೆ. ಹಿಂದೂ ಮತ್ತು ಮುಸ್ಲಿಂ ಧರ್ಮಗಳ ಮಧ್ಯೆ ದ್ವೇಷ ಉಂಟು ಮಾಡಬೇಕು, ಶಾಂತಿ ಕದಡಬೇಕು ಎಂಬ ಉದ್ದೇಶದಿಂದ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ನಮಿತಾ ಕೆ. ಪೂಜಾರಿ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ದೂರನ್ನು ನೀಡಿದ್ದರು. ಈ ಪ್ರಕಾರ ಪೊಲೀಸರು ಭಾರತೀಯ ದಂಡ ಸಂಹಿತೆಯ ವಿವಿಧ ಕಾಲಂಗಳ ಅಡಿ ಪ್ರಕರಣ ದಾಖಲು ಮಾಡಿದ್ದರು. ಹರೀಶ್‌ ಪೂಂಜಾ ಅವರು ಈ ಪ್ರಕರಣವನ್ನು ರದ್ದುಗೊಳಿಸುವಂತೆ ಹೈಕೋರ್ಟ್‌ ಮೆಟ್ಟಿಲೇರಿದ್ದರು.

Advertisement

 

ಇದನ್ನು ಓದಿ: Fact Check Unit: ಸರ್ಕಾರದಿಂದ ಸುಳ್ಳು ಸುದ್ದಿ ತಡೆಗಟ್ಟಲು ಮಹತ್ವದ ಹೆಜ್ಜೆ: ಫ್ಯಾಕ್ಟ್ ಚೆಕ್ ಯುನಿಟ್ ಪ್ರಾರಂಭ!

Advertisement
Advertisement