ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Mangalore: ಕರ್ತವ್ಯಕ್ಕೆ ಹಾಜರಾದ ಕೆಲವೇ ಗಂಟೆಗಳಲ್ಲಿ ಮತ್ತೆ ಸಸ್ಪೆಂಡ್ ಆದ ಅಧಿಕಾರಿ !

Mangalore: ಅಧಿಕಾರಿಯೊಬ್ಬ ವರ್ಗಾವಣೆ ಆದೇಶಕ್ಕೆ ಕೆಎಟಿಯಿಂದ ತಡೆಯಾಜ್ಞೆ ತಂದು ಮತ್ತೆ ಕೆಲಸಕ್ಕೆ ಸೇರಿದ ಕೆಲವೇ ಗಂಟೆಗಳಲ್ಲಿ ಮತ್ತೆ ಅಮಾನಾತಾದ ಘಟನೆ ಪುತ್ತೂರಿನಲ್ಲಿ ನಡೆದಿದೆ.
07:17 AM May 05, 2024 IST | ಸುದರ್ಶನ್ ಬೆಳಾಲು
UpdateAt: 07:17 AM May 05, 2024 IST

Mangalore: ಅಧಿಕಾರಿಯೊಬ್ಬ ವರ್ಗಾವಣೆ ಆದೇಶಕ್ಕೆ ಕೆಎಟಿಯಿಂದ ತಡೆಯಾಜ್ಞೆ ತಂದು ಮತ್ತೆ ಕೆಲಸಕ್ಕೆ ಸೇರಿದ ಕೆಲವೇ ಗಂಟೆಗಳಲ್ಲಿ ಮತ್ತೆ ಅಮಾನಾತಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಎಪಿಎಂಸಿಯಲ್ಲಿ ಸಹಾಯಕ ಕಾರ್ಯದರ್ಶಿಯಾಗಿದ್ದ ರಾಮಚಂದ್ರರನ್ನು ಸೇವೆಯಿಂದ ಅಮಾನತುಗೊಳಿಸಿ ಕರ್ನಾಟಕ ಕೃಷಿ ಮಾರಾಟ ಇಲಾಖೆ ನಿರ್ದೇಶಕ ಎಂ.ಗಂಗಾಧರ ಸ್ವಾಮಿ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.

Advertisement

ತಮ್ಮ ವಿರುದ್ಧ ವರ್ಗಾವಣೆ ವಿರುದ್ಧ ಕೆಎಟಿಯಿಂದ ತಡೆಯಾಜ್ಞೆ ತಂದು ಗುರುವಾರ ಬೆಳಿಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದ ರಾಮಚಂದ್ರ ಅವರಿಗೆ ಮಧ್ಯಾಹ್ನ ವೇಳೆ ಶಾಕಿಂಗ್ ನ್ಯೂಸ್ ಸಿಕ್ಕಿದೆ. ಕರ್ತವ್ಯಕ್ಕೆ ಹಾಜರಾದ ದಿನವೇ ಅಮಾನತು ಆದೇಶ ನೀಡಲಾಗಿದೆ.

ಎಪಿಎಂಸಿ ಅಧಿಕಾರಿ ರಾಮಚಂದ್ರ ತರಕಾರಿ ವ್ಯಾಪಾರಸ್ಥರಿಗೆ ಪದೇ ಪದೇ ಕಿರುಕುಳ ನೀಡುತ್ತಿದ್ದಾರೆ, ತರಕಾರಿ ವಾಹನಗಳ ಒಳ ಪ್ರವೇಶವನ್ನು ನಿರಾಕರಿಸುತ್ತಿದ್ದರು ಮತ್ತು ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ನಿಗದಿತ ಸಮಯಕ್ಕೆ ಸರಿಯಾಗಿ ಪರವಾನಗಿ ನೀಡದೆ ಇರುವುದರಿಂದ ವ್ಯಾಪಾರದಲ್ಲಿ ನಷ್ಟವಾಗಿದೆ’ ಯೆಂದು ಎಪಿಎಂಸಿ ಪ್ರಾಂಗಣದ ತರಕಾರಿ ವ್ಯಾಪಾರಸ್ಥರು ಜನವರಿಯಲ್ಲಿ ಕೃಷಿ ಮಾರಾಟ ಇಲಾಖೆ ನಿರ್ದೇಶಕರಿಗೆ ದೂರು ನೀಡಿದ್ದರು. ಆ ದೂರಿನ ತನಿಖೆಗಾಗಿ ಅಧಿಕಾರಿಗಳ ತಂಡ ರಚಿಸಲಾಗಿತ್ತು.

Advertisement

ಈ ಮಧ್ಯೆ ಅಧಿಕಾರಿ ರಾಮಚಂದ್ರರನ್ನು ಜ.16 ರಿಂದ 2 ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಕಡ್ಡಾಯ ರಜೆ ಮೇಲೆ ತೆರಳುವಂತೆ ಕೃಷಿ ಮಾರಾಟ ಇಲಾಖೆ ನಿರ್ದೇಶಕರು ಆದೇಶ ಮಾಡಿದ್ದರು. ಜತೆಗೆ ಅವರನ್ನು ರಾಯಚೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಖಾಲಿ ಇದ್ದ ಹಿರಿಯ ಮಾರುಕಟ್ಟೆ ಮೇಲ್ವಿಚಾರಕ ಹುದ್ದೆಗೆ ವರ್ಗಾಯಿಸಿ ಕೃಷಿ ಇಲಾಖೆ ಆದೇಶ ಮಾಡಿತ್ತು. ಆದರೆ ರಾಮಚಂದ್ರರವರು ಈ ವರ್ಗಾವಣೆಯ ವಿರುದ್ಧ ನ್ಯಾಯದ ಮೆಟ್ಟಲೇರಿದ್ದರು. ರಾಯಚೂರಿನಲ್ಲಿ ಕರ್ತವ್ಯಗೆ ಹಾಜರಾಗದೆ ವರ್ಗಾವಣೆ ಆದೇಶದ ವಿರುದ್ಧ ಕರ್ನಾಟಕ ಆಡಳಿತಾತ್ಮಕ ನ್ಯಾಯಾಲಯಕ್ಕೆ (ಕೆಎಟಿಗೆ) ದೂರು ಸಲ್ಲಿಸಿದ್ದರು. ಕೆಎಟಿ ಅವರ ವರ್ಗಾವಣೆ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದರಿಂದ ಗುರುವಾರ ಬೆಳಿಗ್ಗೆ ಅವರು ಎಪಿಎಂಸಿ ಸಹಾಯಕ ಕಾರ್ಯದರ್ಶಿ ಕರ್ತವ್ಯಕ್ಕೆ ಹಾಜರಾಗಿದ್ದರು. ಆದರೆ ಮಧ್ಯಾಹ್ನ 12 ಗಂಟೆ ವೇಳೆಗೆ ಅವರಿಗೆ ಅಮಾನತು ಆದೇಶ ಬಂದಿದೆ. ಕರ್ತವ್ಯಕ್ಕೆ ಹಾಜರಾದ ಕೆಲವೇ ಗಂಟೆಗಳಲ್ಲಿ ಅಮಾನತ್ತಾಗಿ ಮತ್ತೆ ಮನೆಗೆ ಮರಳುವಂತಾಗಿದೆ.

ಇದನ್ನೂಓದಿ: HD Revanna Arrest: ಎಚ್ ಡಿ ರೇವಣ್ಣ ಬಂಧನದ ತಕ್ಷಣ ಎಚ್ಚೆತ್ತುಕೊಂಡ HD ಕುಮಾರಸ್ವಾಮಿ, ಮಹತ್ವದ ಸಭೆ-ರೇವಣ್ಣ ಅಮಾನತು ಪಕ್ಕಾ ?!

Advertisement
Advertisement
Next Article