For the best experience, open
https://m.hosakannada.com
on your mobile browser.
Advertisement

SSLC-Result 2023-24: SSLC ಪರೀಕ್ಷೆ ಪಾಸಾದರು ಅಂಕ ಹೆಚ್ಚಿಸಿಕೊಳ್ಳಲು ಪರೀಕ್ಷೆ-02, ಪರೀಕ್ಷೆ-03 ಬರೆಯಲು ಅವಕಾಶ : ಉತ್ತರ ಪತ್ರಿಕೆ ಪಡೆಯಲು ಮೇ 14 ಕೊನೆಯ ದಿನ

SSLC-Result 2023-24: ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯ ರಿಸಲ್ಟ್ ಇದೀಗ ಹೊರ ಬಂದಿದೆ. ಈ ಬಾರಿಯೂ ಸಹ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ
09:37 PM May 09, 2024 IST | ಸುದರ್ಶನ್
UpdateAt: 09:37 PM May 09, 2024 IST
sslc result 2023 24  sslc ಪರೀಕ್ಷೆ ಪಾಸಾದರು ಅಂಕ ಹೆಚ್ಚಿಸಿಕೊಳ್ಳಲು ಪರೀಕ್ಷೆ 02  ಪರೀಕ್ಷೆ 03 ಬರೆಯಲು ಅವಕಾಶ   ಉತ್ತರ ಪತ್ರಿಕೆ ಪಡೆಯಲು ಮೇ 14 ಕೊನೆಯ ದಿನ
Advertisement

SSLC-Result 2023-24: ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯ ರಿಸಲ್ಟ್ ಇದೀಗ ಹೊರ ಬಂದಿದೆ. ಈ ಬಾರಿಯೂ ಸಹ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

Advertisement

2024 ನೇ ಸಾಲಿನ ಎಸೆಸೆಲ್ಸಿ ಫಲಿತಾಂಶ ಇದೀಗ ಪ್ರಕಟವಾಗಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ 8,59,967 ವಿದ್ಯಾರ್ಥಿಗಳು ಈ ಸಲದ ಎಸೆಸೆಲ್ಸಿ ಪರೀಕ್ಷೆ ಬರೆದಿದ್ದರು. ಈ ಪೈಕಿ 6,31,204 ಮಂದಿ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಅದರಲ್ಲಿ 3,43,788 ಬಾಲಕಿಯರು ಹಾಗೂ 2,87,416 ಬಾಲಕರು ತೇರ್ಗಡೆಯಾಗಿದ್ದಾರೆ.

ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

Advertisement

ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆ 94% ಫಲಿತಾಂಶದೊಂದಿಗೆ ಪ್ರಥಮ ಸ್ಥಾನದಲ್ಲಿದ್ದು, ದ.ಕ ಜಿಲ್ಲೆ 92.12 ಶೇ. ಫಲಿತಾಂಶ ಪಡೆದು ದ್ವಿತೀಯ ಸ್ಥಾನದಲ್ಲಿದೆ. ಇನ್ನು ಶಿವಮೊಗ್ಗ ಜಿಲ್ಲೆ 88.67% ಫಲಿತಾಂಶದೊಂದಿಗೆ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಆದರೆ ಈ ಬಾರಿ ಯಾದಗಿರಿ ಜಿಲ್ಲೆ 50.59% ಫಲಿತಾಂಶ ಪಡೆದು ಕೊನೆಯ ಸ್ಥಾನದಲ್ಲಿದೆ.

ಪ್ರಥಮ ಸ್ಥಾನ ಪಡೆದ ಬಾಗಲಕೋಟೆ ವಿದ್ಯಾರ್ಥಿನಿ ಅಂಕಿತ : 

ಬಾಗಲಕೋಟೆಯ ಮುರಾರ್ಜಿ ದೇಸಾಯಿ ಶಾಲೆಯಲ್ಲಿ ಓದುತ್ತಿರುವ ಅಂಕಿತ ಬಸಪ್ಪ ಎಂಬ ವಿದ್ಯಾರ್ಥಿನಿ 625 ಕ್ಕೆ 625 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳು  : (625/624)

ಚಿನ್ಮಯ್ (ದಕ್ಷಿಣ ಕನ್ನಡ)

ಮೇಘ ಶೆಟ್ಟಿ ( ಬೆಂಗಳೂರು )

ಹರ್ಷಿತಾ ಡಿ ಎಂ (ಮಧುಗಿರಿ)

ಸಿದ್ದಾಂತ್ (ಚಿಕ್ಕೋಡಿ)

ದರ್ಶನ್ (ಶಿರಸಿ)

ಚಿನ್ಮಯ್ (ಶಿರಸಿ)

ಶ್ರೀ ರಾಮ್ (ಶಿರಸಿ)

ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳು : (625/623)

ಸೌರವ್ ಕೌಶಿಕ್ ( ಬೆಂಗಳೂರು)

ಅಂಕಿತಾ ಆನಂದ್ ( ಬೆಂಗಳೂರು)

ಧೀರಜ್‌ ಪ್ರೀತಂ ರೆಡ್ಡಿ (ಬೆಂಗಳೂರು)

ಮಾನ್ಯತಾ ಎಸ್. ಮಯ್ಯ ( ಬೆಂಗಳೂರು)

ಮೋನಿಷ್ ಸಾಯಿ ಎಸ್‌ಎನ್ (ಬಾಗೇಪಲ್ಲಿ)

ದರ್ಶಿತಾ ಎ. ( ಕೋಲಾರ)

ಜಾಹ್ನವಿ ಎಸ್. ( ಮೈಸೂರು)

ಡಿ.ಎಸ್‌ ಧನ್ವಿ ( ಮೈಸೂರು)

ಎಸ್ ಎಸ್ ಎಲ್ ಸಿ ಪರೀಕ್ಷೆಯ ಜಿಲ್ಲಾವಾರು ಫಲಿತಾಂಶ :

ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ (94%)

ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ (92.12%)

ಶಿವಮೊಗ್ಗ ಜಿಲ್ಲೆಗೆ ಮೂರನೇ ಸ್ಥಾನ (88.57%)

ಕೊಡಗು ಜಿಲ್ಲೆಗೆ ನಾಲ್ಕನೇ ಸ್ಥಾನ (88.67%)

ಉತ್ತರ ಕನ್ನಡ ಜಿಲ್ಲೆಗೆ ಐದನೇ ಸ್ಥಾನ (86.54%)

ಹಾಸನ ಜಿಲ್ಲೆಗೆ ಆರನೇ ಸ್ಥಾನ (86.28%)

ಮೈಸೂರು ಜಿಲ್ಲೆಗೆ ಏಳನೇ ಸ್ಥಾನ (85.5%)

ಶಿರಸಿ ಜಿಲ್ಲೆಗೆ ಎಂಟನೇ ಸ್ಥಾನ (84.64%)

ಬೆಂಗಳೂರು ಗ್ರಾ. ಜಿಲ್ಲೆಗೆ ಒಂಬತೇ ಸ್ಥಾನ (83.67%)

ಚಿಕ್ಕಮಗಳೂರು ಜಿಲ್ಲೆಗೆ ಹತ್ತನೇ ಸ್ಥಾನ (83.39%)

ವಿಜಯಪುರ ಜಿಲ್ಲೆಗೆ 11ನೇ ಸ್ಥಾನ (79.82%)

ಬೆಂಗಳೂರು ದಕ್ಷಿಣ ಜಿಲ್ಲೆಗೆ 12ನೇ ಸ್ಥಾನ (79%)

ಬಾಗಲಕೋಟೆ ಜಿಲ್ಲೆಗೆ 13ನೇ ಸ್ಥಾನ 177.92%

ಬೆಂಗಳೂರು ಉತ್ತರ ಜಿಲ್ಲೆಗೆ 14ನೇ ಸ್ಥಾನ (77.09%)

ಹಾವೇರಿ ಜಿಲ್ಲೆಗೆ 15ನೇ ಸ್ಥಾನ (75.85%)

ತುಮಕೂರು ಜಿಲ್ಲೆಗೆ 16ನೇ ಸ್ಥಾನ (75.16%)

ಗದಗ ಜಿಲ್ಲೆಗೆ 17ನೇ ಸ್ಥಾನ (74.76%)

ಚಿಕ್ಕಬಳ್ಳಾಪುರ ಜಿಲ್ಲೆಗೆ 18ನೇ ಸ್ಥಾನ (73.61%)

ಮಂಡ್ಯ ಜಿಲ್ಲೆಗೆ 19ನೇ ಸ್ಥಾನ (73.59%)

ಕೋಲಾರ ಜಿಲ್ಲೆಗೆ 20ನೇ ಸ್ಥಾನ (73.57%)

ಚಿತ್ರದುರ್ಗ ಜಿಲ್ಲೆಗೆ 21ನೇ ಸ್ಥಾನ (72.85%)

ಧಾರವಾಡ ಜಿಲ್ಲೆಗೆ 22ನೇ ಸ್ಥಾನ (72.67%)

ದಾವಣಗೆರೆ ಜಿಲ್ಲೆಗೆ 23ನೇ ಸ್ಥಾನ (72.49%)

ಚಾಮರಾಜನಗರ ಜಿಲ್ಲೆಗೆ 24ನೇ ಸ್ಥಾನ (71.59%)

ಚಿಕ್ಕೋಡಿ ಜಿಲ್ಲೆಗೆ 25ನೇ ಸ್ಥಾನ (69.82%)

ರಾಮನಗರ ಜಿಲ್ಲೆಗೆ 26ನೇ ಸ್ಥಾನ (69.53%)

ವಿಜಯನಗರ ಜಿಲ್ಲೆಗೆ 27ನೇ ಸ್ಥಾನ (65.61%)

ಬಳ್ಳಾರಿ ಜಿಲ್ಲೆಗೆ 28ನೇ ಸ್ಥಾನ ಸಿಕ್ಕಿದೆ (64.99%)

ಬೆಳಗಾವಿ ಜಿಲ್ಲೆಗೆ 29ನೇ ಸ್ಥಾನ (64.93%)

ಮಧುಗಿರಿ ಜಿಲ್ಲೆಗೆ 30ನೇ ಸ್ಥಾನ (62.44%)

ರಾಯಚೂರು ಜಿಲ್ಲೆಗೆ 31ನೇ ಸ್ಥಾನ (61.2%)

ಕೊಪ್ಪಳ ಜಿಲ್ಲೆಗೆ 32ನೇ ಸ್ಥಾನ (61.16%)

ಬೀದರ್ ಜಿಲ್ಲೆಗೆ 33ನೇ ಸ್ಥಾನ (57.52%)

ಕಲಬುರಗಿ ಜಿಲ್ಲೆಗೆ 34ನೇ ಸ್ಥಾನ (53.04%)

ಯಾದಗಿರಿ ಜಿಲ್ಲೆಗೆ 35ನೇ ಸ್ಥಾನ (50.59%)

ಪಾಸಾದರು ಅಂಕ ಹೆಚ್ಚಿಸಿಕೊಳ್ಳಲು ಪರೀಕ್ಷೆ-02 ಪರೀಕ್ಷೆ-03 ಬರೆಯಬಹುದು :

ಪಾಸಾಗಲಿ ಅಥವಾ ಫೇಲಾಗಲಿ ಮೂರು ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಒಂದು ವೇಳೆ ಪಾಸಾಗಿದ್ದರು ಸಹ ಹೆಚ್ಚಿನ ಅಂಕ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಪರೀಕ್ಷೆ ಎರಡು ಅಥವಾ ಪರೀಕ್ಷೆ ಮೂರು ಬರೆಯ ಬಹುದಾಗಿದೆ.

ಈ ಬಾರಿಯ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ರಾಜ್ಯದ ಒಟ್ಟಾರೆ 78 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ದಾಖಲಾಗಿದೆ. ಹಿಂದಿನ ವರ್ಷಕ್ಕೆ ಹೋಲಿಸಿಕೊಂಡರೆ 2022-2023ರಲ್ಲಿ 83.89% ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು, ಆದರೆ ಈ ಬಾರಿಯ ಪರೀಕ್ಷೆಯಲ್ಲಿ ಕೇವಲ 73.40% ಮಂದಿ ಉತ್ತೀರ್ಣರಾಗಿದ್ದಾರೆ. ಹೋದ ಬಾರಿಯ ಫಲಿತಾಂಶಕ್ಕೆ ಈ ಬಾರಿ ಫಲಿತಾಂಶವನ್ನು ತಾಳೆ ಮಾಡಿ ನೋಡಿದರೆ ಶೇಕಡಾ 10.49%ರಷ್ಟು ಫಲಿತಾಂಶ ಕಡಿಮೆಯಾಗಿದೆ.

ಹೋದ ಸಲದಂತೆ ಈ ಬಾರಿಯೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಮೇಲುಗೈ ಸಾಧಿಸಿರುವುದು ಸಂತಸದ ಸಂಗತಿಯಾಗಿದೆ. ಒಟ್ಟಾರೆ ಈ ಬಾರಿ ಗ್ರಾಮೀಣ ಪ್ರದೇಶದ 2.71 ಲಕ್ಷ ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಸರ್ಕಾರಿ ಶಾಲೆಗಳ 2.43ಲಕ್ಷ ಮಂದಿ ಉತ್ತೀರ್ಣರಾಗಿದ್ದು 74.17% ಫಲಿತಾಂಶ ದಾಖಲಿಸಿದ್ದಾರೆ. ಇನ್ನು ನಗರ ಪ್ರದೇಶದ 3.59 ಲಕ್ಷ ಮಂದಿ ಉತ್ತೀರ್ಣರಾಗಿ 72.83% ಗಳಿಸಿದ್ದಾರೆ.

ಇನ್ನು ಇದೇ ವೇಳೆ ಉತ್ತರ ಪತ್ರಿಕೆಯನ್ನು ಪಡೆಯಲು ಮೇ 14 ಕೊನೆಯ ದಿನ ಎಂಬುದಾಗಿ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ತಿಳಿಸಿದ್ದಾರೆ.

Advertisement
Advertisement
Advertisement