ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Ration Card: ಪಡಿತರ ಚೀಟಿದಾರರಿಗೆ ಭರ್ಜರಿ ಸಿಹಿಸುದ್ದಿ! ಇನ್ಮುಂದೆ ಖಾತೆಗೆ ಹಣದ ಜೊತಗೆ ಇತರೇ ಧಾನ್ಯಗಳು ಲಭ್ಯ

10:44 AM Nov 20, 2023 IST | ಕಾವ್ಯ ವಾಣಿ
UpdateAt: 11:02 AM Nov 20, 2023 IST
Advertisement

Ration Card: ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ದಾರರಿಗೆ (Ration Card) ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ! ಇನ್ಮುಂದೆ ಖಾತೆಗೆ ಹಣದ ಜೊತಗೆ ಇತರೇ ಧಾನ್ಯಗಳು ಲಭ್ಯವಾಗಲಿದೆ. ಹೌದು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ದಾವಣಗೆರೆ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ನವೆಂಬರ್ ತಿಂಗಳಿಗೆ ಅನ್ವಯವಾಗುವಂತೆ ಪಡಿತರ ಆಹಾರ ಧಾನ್ಯ ಹಂಚಿಕೆ ಮಾಡಲಾಗಿದೆ.

Advertisement

ಸದ್ಯ ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾಡ್‌ರ್ಗೆ 21 ಕೆ.ಜಿ ಅಕ್ಕಿ ಮತ್ತು 14 ಕೆ.ಜಿ ರಾಗಿ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 3 ಕೆ.ಜಿ ಅಕ್ಕಿ ಮತ್ತು ಪ್ರತಿ ಸದಸ್ಯರಿಗೆ 2ಕೆ.ಜಿ ರಾಗಿ ಉಚಿತವಾಗಿ ವಿತರಿಸಲಾಗುತ್ತದೆ. ಪ್ರತಿ ಕೆ.ಜಿಗೆ 15 ರೂ.ರಂತೆ ಒಪ್ಪಿಗೆ ನೀಡಿದ ಎಪಿಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆಜಿ ಅಕ್ಕಿ ವಿತರಿಸಲಾಗುವುದು.

ಮುಖ್ಯವಾಗಿ ಸರ್ಕಾರದ ಗ್ಯಾರಂಟಿ ಯೋಜನೆಯಡಿ 5 ಕೆಜಿ ಅಕ್ಕಿ ಬದಲಾಗಿ ಪಡಿತರ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ಪರಿಹರಿಸಿಕೊಳ್ಳಬಹುದೆಂದು ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಡಾ. ಎಂ.ಬಿ. ಅಶ್ವತ್ಥ ತಿಳಿಸಿದ್ದಾರೆ.

Advertisement

ಇದನ್ನು ಓದಿ: Government Scheme: ತಿಂಗಳಲ್ಲಿ 5 ಸಾವಿರ ಪಡೆಯಲು ಸರ್ಕಾರದಿಂದ ಸುವರ್ಣ ಅವಕಾಶ ! ಈ ಕೂಡಲೇ ಅರ್ಜಿ ಸಲ್ಲಿಸಿ

Advertisement
Advertisement