For the best experience, open
https://m.hosakannada.com
on your mobile browser.
Advertisement

NEET UG 2024: ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ, ನೀಟ್ ಮರು ಪರೀಕ್ಷೆಗೆ ಮತ್ತು ತನಿಖೆಗೆ ಸಿಎಂ ಆಗ್ರಹ

NEET UG 2024: ನೀಟ್ ಪರೀಕ್ಷೆಯಲ್ಲಿ ರ‍್ಯಾಂಕ್ ನೀಡುವುದರಲ್ಲಿ ವಿದ್ಯಾರ್ಥಿಗಳಿಗೆ ದೊಡ್ಡ ಅನ್ಯಾಯವಾಗಿದೆ, ಈ ಕುರಿತು ತನಿಖೆಯಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
09:00 PM Jun 15, 2024 IST | ಸುದರ್ಶನ್
UpdateAt: 09:00 PM Jun 15, 2024 IST
neet ug 2024  ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ  ನೀಟ್ ಮರು ಪರೀಕ್ಷೆಗೆ ಮತ್ತು ತನಿಖೆಗೆ ಸಿಎಂ ಆಗ್ರಹ
Image Credit: Mint
Advertisement

NEET UG 2024:  ನೀಟ್ 2024 (NEET UG 2024) ಪರೀಕ್ಷೆಯಲ್ಲಿ ರ‍್ಯಾಂಕ್ ನೀಡುವುದರಲ್ಲಿ ಮತ್ತು ನಿರಂತರವಾಗಿ ಅಭ್ಯಾಸ ಮಾಡಿ ಬರೆದ ವಿದ್ಯಾರ್ಥಿಗಳಿಗೆ ದೊಡ್ಡ ಅನ್ಯಾಯವಾಗಿದೆ. ಈ ಬಗ್ಗೆ ತನಿಖೆಯಾಗಬೇಕು ಮತ್ತು ಮರು ಪರೀಕ್ಷೆ ನಡೆಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

Advertisement

ಇಂದು ಮೈಸೂರು ನಗರದಲ್ಲಿ ಮಾಧ್ಯಮದವರ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಕೃಪಾಂಕ ಕೊಟ್ಟು ಉತ್ತೀರ್ಣ ಮಾಡುವುದು ಒಂದು ಕೆಟ್ಟ ಅಭ್ಯಾಸ. ಎನ್‌ಟಿಎ ಪರೀಕ್ಷೆಯನ್ನು ಸರಿಯಾಗಿ ನಡೆಸದೇ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದಿದ್ದಾರೆ.

ದಕ್ಷಿಣ ಭಾರತದಲ್ಲಿ ಜನ ಬಿಜೆಪಿಯನ್ನು ಬೆಂಬಲಿಸುವುದಿಲ್ಲ
ದಕ್ಷಿಣ ಭಾರತದ ಏಳು ಜನರು ಕೇಂದ್ರದಲ್ಲಿ ಸಚಿವರಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಏನು ಮಾಡಿದರೂ ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಜನ ಬೆಂಬಲಿಸುವುದಿಲ್ಲ. ಏಕೆಂದರೆ ಬಿಜೆಪಿಯು ಆರ್‌ಎಸ್‌ಎಸ್‌ನ ರಾಜಕೀಯ ಮುಖವಾಡ. ಹಾಗಾಗಿ ಉತ್ತರ ಭಾರತದಲ್ಲಿ ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ. ಆರ್‌ಎಸ್‌ಎಸ್‌ನ ಮುಖ್ಯಸ್ಥರು ಅಹಂಕಾರಕ್ಕೆ ಜನ ಸರಿಯಾದ ಪಾಠ ಕಲಿಸಿದ್ದಾರೆ ಎಂದು ಹೇಳಿದ್ದಾರೆ ಎಂದರು.

Advertisement

ಅರುಂಧತಿ ರಾಯ್ ವಿರುದ್ಧ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯದ್ದು ದ್ವೇಷದ ರಾಜಕಾರಣ. ಹೆದರಿಸುವುದು ಬೆದರಿಸುವುದು, ಇಡಿ, ಸಿಬಿಐ ಬಳಕೆ ಮಾಡುವುದನ್ನು ಮೊದಲಿನಿಂದಲೂ ಮಾಡಿಕೊಂಡು ಬರುತ್ತಿದ್ದಾರೆ. ಅದಕ್ಕಾಗಿ ಜನ ಈ ಬಾರಿ ಅವರಿಗೆ ಬಹುಮತ ಕೊಡಲಿಲ್ಲ ಎಂದರು.

ದ್ವೇಷದ ರಾಜಕಾರಣ ಬಿಜೆಪಿ ಕೆಲಸ ಎಂದ ಸಿಎಂ
ದೇವೇಗೌಡರ ಕುಟುಂಬದ ನಂತರ ಯಡಿಯೂರಪ್ಪ ಅವರ ಕುಟುಂಬವನ್ನು ಗುರಿಮಾಡಲಾಗಿದೆ ಈಗ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯನವರು, ನಮ್ಮ ಮೇಲೆ ಡಿ.ಕೆ. ಶಿವಕುಮಾರ್, ರಾಹುಲ್ ಗಾಂಧಿ ಅವರ ಮೇಲೆ ಕೇಸು ಹಾಕಿರುವುದನ್ನು ಏನೆಂದು ಕರೆಯಬೇಕು. ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನೇ ರದ್ದುಗೊಳಿಸಿದ್ದನ್ನು ಏನೆಂದು ಕರೆಯುವುದು ಎಂದು ಅವರು ಪ್ರಶ್ನಿಸಿದರು.

ಈಗ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿಗೆ ಕಲಿಸಿದ್ದನ್ನು ಏನೆಂದು ಕರೆಯಬೇಕು. ದ್ವೇಷದ ರಾಜಕಾರಣವೋ ಅಥವಾ, ಪ್ರೀತಿಯ ರಾಜಕಾರಣ ಎಂದು ಕರೆಯಬೇಕೋ ? ಸೇಡಿನ ರಾಜಕಾರಣ ಮಾಡುವುದು ಅವರು, ನಾವು ಎಂದೂ ಸೇಡಿನ ರಾಜಕಾರಣ ಮಾಡುವುದಿಲ್ಲ ಎಂದರು.

ಇದೀಗ ಎಸ್.ಸಿ.ಎಸ್.ಟಿ ಮೆರಿಟ್ ವಿದ್ಯಾರ್ಥಿ ವೇತನವನ್ನು ಶೇ. 60ರಿಂದ ಶೇ 75 ಕ್ಕೆ ಏರಿಸಿದ್ದು, 6 ಲಕ್ಷ ಸೀಲಿಂಗ್ ಲಿಮಿಟ್ ನಿಗದಿಪಡಿಸಿರುವುದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು. ಅಲ್ಲದೆ, ಎಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜಿನ ಶುಲ್ಕ ಶೇ.10%ರಷ್ಟು ಹೆಚ್ಚಾಗಿರುವ ಬಗ್ಗೆ ನನಗೆ ಈ ವಿಚಾರ ಗೊತ್ತಿಲ್ಲ ಎಂದಿದ್ದಾರೆ.

Advertisement
Advertisement
Advertisement