For the best experience, open
https://m.hosakannada.com
on your mobile browser.
Advertisement

New Ration Card Update: ಹೊಸ ರೇಷನ್ ಕಾರ್ಡ್'ಗೆ ಅರ್ಜಿ ಹಾಕಿದವರಿಗೆ ಮುಖ್ಯ ಮಾಹಿತಿ !!

10:06 AM Dec 23, 2023 IST | ಕಾವ್ಯ ವಾಣಿ
UpdateAt: 11:14 AM Dec 23, 2023 IST
new ration card update   ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಿದವರಿಗೆ ಮುಖ್ಯ ಮಾಹಿತಿ
Advertisement

New Ration Card Update: ರಾಜ್ಯದೆಲ್ಲೆಡೆ ಹೊಸ ರೇಷನ್ ಕಾರ್ಡ್ ಗೆ (New Ration Card Update) ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ APL, BPL ಕಾರ್ಡ್ ವಿತರಣೆ ಮಾಡಲು ಆಹಾರ ಇಲಾಖೆ ಮುಂದಾಗಿದೆ.

Advertisement

ಆಹಾರ ಇಲಾಖೆಯಿಂದ ಹೊಸದಾಗಿ ರೇಷನ್ ಕಾರ್ಡ್ ಗಾಗಿ (New Ration Card) ಸುಮಾರು 3 ಲಕ್ಷ ಅರ್ಜಿಗಳನ್ನು ಸಲ್ಲಿಸಲಾಗಿತ್ತು, ಅದರಲ್ಲಿ ಹೊಸ BPL, APL ರೇಷನ್ ಕಾರ್ಡ್ ಗೆ ಸಲ್ಲಿಸಿದ್ದವರಿಗೆ, ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿಕೊಂಡು ಅರ್ಜಿಗಳನ್ನು ವಿಲೇವಾರಿ ಮಾಡೋ ಕಾರ್ಯ ಆರಂಭಿಸಲಾಗಿದೆ.

ಹೌದು, ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಹೊಸದಾಗಿ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೆ ಕಾರ್ಡ್ ನೀಡುವುದನ್ನು ನಿಲ್ಲಿಸಲಾಗಿತ್ತು. ರಾಜ್ಯದಲ್ಲಿ 2.95 ಅರ್ಜಿಗಳು ಬಾಕಿಯಿದ್ದು, ಶೀಘ್ರವೇ ಪರಿಶೀಲಿಸಿ ಕಾರ್ಡ್ ವಿತರಣೆ ಮಾಡುವಂತೆ ಅಕಾರಿಗಳಿಗೆ ಸೂಚನೆ ನೀಡಲಾಗಿದೆ.

Advertisement

ಇದನ್ನು ಓದಿ: Congress: ಲೋಕಸಭಾ ಚುನಾವಣೆ ಬಳಿಕ ದೇಶದಲ್ಲಿ ಕಾಂಗ್ರೆಸ್ ಸ್ಥಿತಿ ಹೇಗಿರುತ್ತೆ ?!

ಮುಖ್ಯವಾಗಿ ಈಗಾಗಲೇ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿರುವ ಫಲಾನುಭವಿಗಳು ರೇಷನ್ ಕಾರ್ಡ್ ನಲ್ಲಿ ಹೆಸರು ಬಂದಿದೆಯಾ ಅಂತ ಈ ರೀತಿ ಚೆಕ್ ಮಾಡಬಹುದು.

ಮೊದಲಿಗೆ https://ahara.kar.nic.in/Home/EServices ವಿಭಾಗದಲ್ಲಿ ಎಡ ಭಾಗದಲ್ಲಿ ಕಾಣುವ ಈ ಪಡಿತರ ಚೀಟಿ ಎನ್ನುವ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ಅಲ್ಲಿ ನಿಮಗೆ ವಿತರಣೆಯಾಗದ ಹೊಸ ಪಡಿತರ ಚೀಟಿ ಲಿಸ್ಟ್ ಎಂಬುದು ಕಾಣಿಸುತ್ತದೆ.
ನಂತರ ನೀವು ನಿಮ್ಮ ಜಿಲ್ಲೆ ಗ್ರಾಮ ಹಾಗೂ ಮತದಾರ ವಿವರಗಳನ್ನು ನೀಡಿ ಗೋ ಎಂದು ಕ್ಲಿಕ್ ಮಾಡಿದರೆ ಒಂದು ಲಿಸ್ಟ್ ತೆರೆದುಕೊಳ್ಳುತ್ತದೆ.
ನಂತರ ವಿತರಣೆ ಆಗದೇ ಇರುವ ಹೊಸ ರೇಷನ್ ಕಾರ್ಡ್ ಲಿಸ್ಟ್ ಕಾಣುತ್ತದೆ. ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದ್ರೆ ಸದ್ಯದಲ್ಲಿಯೇ ರೇಷನ್ ಕಾರ್ಡ್ ಬರಲಿದೆ ಎಂದು ಅರ್ಥ.

Advertisement
Advertisement
Advertisement