ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Bantwala: ಬಂಟ್ವಾಳ; ಚುನಾವಣಾ ಕರ್ತವ್ಯದಲ್ಲಿದ್ದ ಪಂಚಾಯತ್‌ ಕಾರ್ಯದರ್ಶಿ ನಾಪತ್ತೆ

Bantwala: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ಅಧಿಕಾರಿಯೊಬ್ಬರು ಕಾಣೆಯಾಗಿರುವ ಕುರಿತು ಪೂಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
02:06 PM Mar 29, 2024 IST | ಸುದರ್ಶನ್
UpdateAt: 02:09 PM Mar 29, 2024 IST
Advertisement

Bantwala: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ಅಧಿಕಾರಿಯೊಬ್ಬರು ಕಾಣೆಯಾಗಿರುವ ಕುರಿತು ಪೂಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಇದನ್ನೂ ಓದಿ : Bengaluru: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ - ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಪ್ರಮುಖ ಆರೋಪಿ !!

ಅತ್ತ ಕರ್ತವ್ಯಕ್ಕೂ ಹೋಗದೆ, ಇತ್ತ ಮನೆಗೂ ಬಾರದೇ ಕಾಣೆಯಾಗಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಈ ಕುರಿತು ಪೂಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಅಮ್ಟಾಡಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿ, ಕೊಲ್ಪೆದಬೈಲು ನಿವಾಸಿ ಲಕ್ಷ್ಮೀನಾರಾಯಣ ಎಂಬುವವರೇ ಕಾಣೆಯಾದ ವ್ಯಕ್ತಿ. ಬುಧವಾರ (ಮಾ.27) ಮಧ್ಯಾಹ್ನದ ನಂತರ ಇವರು ಕಚೇರಿಯಿಂದ ತೆರಳಿದ್ದಾರೆ. ಫೋನ್‌ ಸ್ವಿಚ್‌ಆಫ್‌ ಆಗಿದ್ದು, ಮನೆಯವರ ಸಂಪರ್ಕಕ್ಕೂ ಸಿಗದೆ ಕಾಣೆಯಾಗಿದ್ದಾರೆ. ಈ ಕುರಿತು ಇವರ ಪತ್ನಿ ಪೂಂಜಾಲಕಟ್ಟೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: Mangalore: ಮಂಗಳೂರು ಕ್ಷೇತ್ರದಲ್ಲಿ 'ಸೌಜನ್ಯಗಳಿಗಾಗಿ ನೋಟಾ' ಚಳವಳಿ ಶುರು - ಈ ಸಲ ಎಲ್ಲಾ ಮತ ಲೆಕ್ಕಾಚಾರ ಅಡಿ ಮೇಲು !

ಇವರು ಎಸ್‌ಎಸ್‌ಟಿ ತಂಡದಲ್ಲಿ ಚುನಾವಣೆಗೆ ಸಂಬಂಧಿಸಿದ ಕೆಲಸ ಮಾಡುತ್ತಿದ್ದು, ಕರ್ತವ್ಯಕ್ಕೆ ಹಾಜರಾಗಿಲ್ಲ ಎಂದು ಇತರೆ ಸಿಬ್ಬಂದಿ ಬಂಟ್ವಾಳ ಸಹಾಯಕ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ. ಇವರು ಈ ಹಿಂದೆ ಕೂಡಾ ಇದೇ ರೀತಿ ಕಾಣೆಯಾಗಿದ್ದು, ಪೊಲೀಸರು ಪತ್ತೆ ಮಾಡಿದ್ದರು.

ಬೈಕ್‌ ಮತ್ತು ಮೊಬೈಲ್‌ ಫೋನ್‌ ಬೆಳ್ತಂಗಡಿಯಲ್ಲಿ ಪತ್ತೆಯಾಗಿದ್ದು, ಇದೀಗ ಪೊಲೀಸರು ಲಕ್ಷ್ಮೀನಾರಾಯಣ ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Advertisement
Advertisement