For the best experience, open
https://m.hosakannada.com
on your mobile browser.
Advertisement

Parliment election: 18 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಫೈನಲ್ ಮಾಡಿದ ಬಿಜೆಪಿ !! ಕಗ್ಗಂಟಾಗಿ ಉಳಿದ 8 ಕ್ಷೇತ್ರಗಳು

06:31 AM Mar 12, 2024 IST | ಹೊಸ ಕನ್ನಡ
UpdateAt: 09:17 AM Mar 12, 2024 IST
parliment election  18 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಫೈನಲ್ ಮಾಡಿದ ಬಿಜೆಪಿ    ಕಗ್ಗಂಟಾಗಿ ಉಳಿದ 8 ಕ್ಷೇತ್ರಗಳು

Parliment election ಗೆ ಕರ್ನಾಟಕದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಬಿಜೆಪಿ ಭಾರೀ ಕಸರತ್ತು ನಡೆಸುತ್ತಿದೆ. ರಾಜ್ಯದ ವರಿಷ್ಠರು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಈ ನಡುವೆ 18 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್ ಮಾಡಲಾಗಿದೆ ಎಂಬ ಸುದ್ದಿ ಕೇಳಿಬರುತ್ತಿದೆ.

Advertisement

ಇದನ್ನೂ ಓದಿ: Pocso case: ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ - ಬಾಲ ಮಂಜುನಾಥ ಸ್ವಾಮಿಯ ವಿಡಿಯೋ ವೈರಲ್ !!

ಹೌದು, ಇಂದು ದೆಹಲಿಯಲ್ಲಿ ನಡೆದ ಬಿಜೆಪಿ(BJP) ಕೇಂದ್ರೀಯ ಚುನಾವಣಾ ಸಮಿತಿ ಸಭೆಯಲ್ಲಿ ಕರ್ನಾಟಕವೂ ಸೇರಿ ವಿವಿಧ ರಾಜ್ಯಗಳ 150 ಅಭ್ಯರ್ಥಿಗಳ ಎರಡನೇ ಪಟ್ಟಿ ಬಗ್ಗೆ ಚರ್ಚಿಸಲಾಗಿದೆ. ಹೈಕಮಾಂಡ್ ಜತೆ ರಾಜ್ಯ ಬಿಜೆಪಿ ನಾಯಕರು ನಡೆಸಿದ ಸಭೆಯಲ್ಲಿ ಕರ್ನಾಟಕ(Karnataka) ದ 28 ಕ್ಷೇತ್ರಗಳ ಪೈಕಿ 18 ಲೋಕಸಭಾ ಕ್ಷೇತ್ರಗಳಿಗೆ ಟಿಕೆಟ್ ಫೈನಲ್ ಮಾಡಲಾಗಿದ್ದು 10 ಕ್ಷೇತ್ರಗಳ ಟಿಕೆಟ್ ಗೊಂದಲವಾಗಿಯೇ ಉಳಿದಿದೆ ಎನ್ನಲಾಗಿದೆ.

Advertisement

ಈ ಹಾಲಿ ಸಂಸದರಿಗೆ ಟಿಕೆಟ್ ಅನುಮಾನ?

ರಾಜ್ಯದ 28 ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳು ಬಿಜೆಪಿ ಕಗ್ಗಂಟಾಗಿವೆ. ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಉತ್ತರ ಕನ್ನಡ ಅನಂತಕುಮಾರ್ ಹೆಗಡೆ, ಬೀದರ್ ಕ್ಷೇತ್ರದ ಭಗವಂತ್ ಖೂಬಾ, ದಾವಣಗೆರೆಯ ಸಿದ್ದೇಶ್ವರ್ಗೆ ಈ ಬಾರಿ ಲೋಕಸಭಾ ಟಿಕೆಟ್ ಸಿಗುವುದು ಅನುಮಾನ ಎಂದು ತಿಳಿದುಬಂದಿದೆ. ಇದರೊಂದಿಗೆ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಳಗಾವಿಯ ಟಿಕೆಟ್ ಕೂಡ ಕಗ್ಗಂಟಾಗಿದೆ.

Advertisement
Advertisement