For the best experience, open
https://m.hosakannada.com
on your mobile browser.
Advertisement

Hijab Row: ಹಿಜಾಬ್ ಕುರಿತು ಸರ್ಕಾರದ ಹೊಸ ಆದೇಶ- ಶಾಕಿಂಗ್ ಸ್ಟೇಟ್ಮೆಂಟ್ ನೀಡಿದ ಚಕ್ರವರ್ತಿ ಸೂಲಿಬೆಲೆ

12:46 PM Dec 23, 2023 IST | ಕಾವ್ಯ ವಾಣಿ
UpdateAt: 01:15 PM Dec 23, 2023 IST
hijab row  ಹಿಜಾಬ್ ಕುರಿತು ಸರ್ಕಾರದ ಹೊಸ ಆದೇಶ  ಶಾಕಿಂಗ್ ಸ್ಟೇಟ್ಮೆಂಟ್ ನೀಡಿದ ಚಕ್ರವರ್ತಿ ಸೂಲಿಬೆಲೆ
Advertisement

Hijab Row: ಮುಸ್ಲಿಂ ಮತಗಳನ್ನು ತಮ್ಮತ್ತ ಸೆಳೆಯಲು, ರಾಜ್ಯದ ಶಾಲೆ ಕಾಲೇಜುಗಳಲ್ಲಿ ಮತ್ತೆ ಹಿಜಾಬ್‌ಗೆ (Hijab Row) ಅವಕಾಶ ನೀಡಲಾಗುವುದು ಎಂಬ ಹೇಳಿಕೆಯನ್ನು ನೀಡಿದ್ದು, ಸಿಎಂ ಸಿದ್ದರಾಮಯ್ಯ ನೀಡಿದ ಈ ಹೇಳಿಕೆ ರಾಜ್ಯಾದ್ಯಂತ ವಿವಾದದಕ್ಕೆ ಎಡೆ ಮಾಡಿ ಕೊಟ್ಟಿದೆ.

Advertisement

ರಾಜ್ಯದ ಶಾಲೆ ಕಾಲೇಜುಗಳಲ್ಲಿ ಮತ್ತೆ ಹಿಜಾಬ್‌ಗೆ (Hijab Row) ಅವಕಾಶ ನೀಡಲಾಗುವುದು ಎಂಬ ಮುಖ್ಯಮಂತ್ರಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravarty Sulibele), ಸಿದ್ದರಾಮಯ್ಯ (CM Siddaramaiah) ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಒಂಥರ ಮುಸ್ಲಿಂ ಪಾರ್ಟಿ (Congress Muslim Party) ಆಗಿ ನಿರ್ಮಾಣಗೊಂಡಿದೆ ಎಂದು ಕಿಡಿಕಾರಿದರು.

Advertisement

ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ, ಮುಖ್ಯವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಾನೂನಿನ ಮೇಲೆ ವಿಶ್ವಾಸ ಇಲ್ಲ. ಕಾನೂನು ಹೇಳಿದ್ದನ್ನು ಒಪ್ಪಿಕೊಳ್ಳುವಂಥ ಧಾವಂತವೂ ಇಲ್ಲ. ಹೇಗಾದರೂ ಮಾಡಿ ಮುಸ್ಲಿಂ ಮತಗಳನ್ನು ತಮ್ಮತ್ತ ಸೆಳೆಯುವುದೇ ಅವರ ತಂತ್ರವಾಗಿದೆ. ಈ ಕಾರಣಕ್ಕೆ ಕಾಂಗ್ರೆಸ್ ಮುಸ್ಲಿಂ ಪಾರ್ಟಿ ಆಗಿ ಮಾರ್ಪಟ್ಟಿದೆ ಎಂದು ಚಕ್ರವರ್ತಿ ಸೂಲಿಬೆಲೆ ಕಿಡಿಕಾರಿದ್ದಾರೆ.

ಶಿಕ್ಷಣ ನೀತಿಯಲ್ಲಿ ಸಮಾನತೆ ಇರಬೇಕೆಂಬ ನಿಟ್ಟಿನಲ್ಲಿ ಬಿಜೆಪಿ ಸರ್ಕಾರವಿದ್ದಾಗ ವಸ್ತ್ರ ಸಂಹಿತೆಯನ್ನು ಜಾರಿ ಮಾಡಲಾಗಿತ್ತು. ಆದರೆ ಹಿಜಾಬ್ ಹಾಕಿಕೊಂಡು ತಿರುಗುವುದನ್ನು ಪಿಎಫ್ಐನವರು ಮಾಡಿದರು. ಈ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ಪಿಎಫ್‌ಐನವರ ಕೇಸ್‌ಗಳನ್ನು ತೆರವು ಮಾಡುವ ಮೂಲಕ ಅವರ ಬೆಂಬಲಿಗರಂತೆ ವರ್ತಿಸಿದ್ದರು. ಈಗ ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಬಳಿಕ ಹಿಜಾಬ್ ನಿಷೇಧವನ್ನು ತೆರವು ಮಾಡಿದ್ದಾರೆ. ಇದು ಬಹಳ ದುರಂತಕಾರಿ ಸಂಗತಿ ಇದು ಎಂದು ಚಕ್ರವರ್ತಿ ಸೂಲಿಬೆಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: Petrol- diesel price : ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ !!

Advertisement
Advertisement
Advertisement