For the best experience, open
https://m.hosakannada.com
on your mobile browser.
Advertisement

Exam Postponed: ಪ್ರಾಯೋಗಿಕ ಪರೀಕ್ಷೆ ಮುಂದಕ್ಕೆ

Exam Postponed: ಕೃಷಿ ಮತ್ತು ತೋಟಗಾರಿಕೆ ವಿವಿಗಳಲ್ಲಿ ವಿವಿಧ ಸ್ನಾತಕ ಪದವಿಗಳ ಪ್ರವೇಶಕ್ಕೆ ಮೇ 14ರಂದು ನಿಗದಿಯಾಗಿದ್ದ ಪ್ರಾಯೋಗಿಕ ಪರೀಕ್ಷೆಯನ್ನು ಮೇ 25 ಕ್ಕೆ ಮುಂದೂಡಲಾಗಿದೆ. 
07:57 AM May 13, 2024 IST | ಸುದರ್ಶನ್
UpdateAt: 09:11 AM May 13, 2024 IST
exam postponed  ಪ್ರಾಯೋಗಿಕ ಪರೀಕ್ಷೆ ಮುಂದಕ್ಕೆ
Advertisement

Exam Postponed: ರಾಜ್ಯದ ನಾನಾ ಕೃಷಿ ಮತ್ತು ತೋಟಗಾರಿಕೆ ವಿವಿಗಳಲ್ಲಿ ವಿವಿಧ ಸ್ನಾತಕ ಪದವಿಗಳ ಪ್ರವೇಶಕ್ಕೆ ಮೇ 14ರಂದು ನಿಗದಿಯಾಗಿದ್ದ ಪ್ರಾಯೋಗಿಕ ಪರೀಕ್ಷೆಯನ್ನು ಮೇ 25 ಕ್ಕೆ ಮುಂದೂಡಲಾಗಿದೆ.

Advertisement

ಇದನ್ನೂ ಓದಿ: New Ration Card: ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ; ಎಲೆಕ್ಷನ್ ಬಳಿಕ ಹೊಸ ಕಾರ್ಡ್

2024-25ನೇ ಸಾಲಿನ ಪ್ರಥಮ ವರ್ಷದ ಸ್ನಾತಕ ಪದವಿಗಳಿಗೆ ಬೆಂಗ ಳೂರು, ಧಾರವಾಡ ಕೃಷಿ ವಿವಿ, ರಾಯಚೂರು ಮತ್ತು ಬಾಗಲಕೋಟೆ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಮತ್ತು ಬೀದರ್‌ನ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿವಿಯಲ್ಲಿ ವಿವಿಧ ಸ್ನಾತಕ ಪದವಿಗಳಿಗೆ ಮೇ 17ರಂದು ಸಂಜೆ 4 ಗಂಟೆಯೊಳಗೆ ಸೂಕ್ತ ದಾಖಲೆಗಳನ್ನು ಖುದ್ದು ಸಂಬಂಧಪಟ್ಟ ಪ್ರಾಯೋಗಿಕ ಪರೀಕ್ಷಾ ಕೇಂದ್ರಗಳಲ್ಲೇ ಸಲ್ಲಿಸಬೇಕು ಎಂದು ಕೃಷಿ ವಿವಿ ಪ್ರಕಟಣೆ ತಿಳಿಸಿದೆ.

Advertisement

ಇದನ್ನೂ ಓದಿ: Crime: ಉದ್ಯಾನದಲ್ಲಿ ಕುಳಿತಿದ್ದ ಪ್ರೇಮಿಗಳ ಮೇಲೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಮುಂದೂಡಿರುವ ಸ್ನಾತಕ ಪದವಿಯ ಪ್ರಾಯೋಗಿಕ ಪರೀಕ್ಷೆಗಳ ಕುರಿತು ಹಾಗೂ ದಾಖಲಾತಿ ಸಲ್ಲಿಕೆಯ ಕುರಿತ ಪೂರ್ಣ ಮಾಹಿತಿಯನ್ನು ಕರ್ನಾಟಕ ರಾಜ್ಯದ ಎಲ್ಲಾ ಕೃಷಿ ಮತ್ತು ಕೃಷಿ ಸಂಬಂಧಿತ ವಿವಿಗಳ ಅಧಿಕೃತ ಅಂತರ್ಜಾಲದಿಂದ ಪಡೆಯಬಹುದು ಎಂದು ತಿಳಿಸಿದೆ.

Advertisement
Advertisement
Advertisement