For the best experience, open
https://m.hosakannada.com
on your mobile browser.
Advertisement

Puttur: ಕಾಂತಮಂಗಲದಲ್ಲಿ ವ್ಯಕ್ತಿಯ ಕೊಲೆ : ಆರೋಪಿ ಎಡಮಂಗಲ ನಿವಾಸಿಯ ಬಂಧನ

Puttur:  ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲಾ ಜಗಲಿಯಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿಯ ಕೊಲೆ ಪ್ರಕರಣವನ್ನು ಭೇದಿಸಿರುವ ಸುಳ್ಯ ಪೊಲೀಸರು ಕೃತ್ಯ ಎಸಗಿದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
09:10 AM Jun 19, 2024 IST | Praveen Chennavara
UpdateAt: 09:10 AM Jun 19, 2024 IST
puttur  ಕಾಂತಮಂಗಲದಲ್ಲಿ  ವ್ಯಕ್ತಿಯ ಕೊಲೆ   ಆರೋಪಿ ಎಡಮಂಗಲ ನಿವಾಸಿಯ ಬಂಧನ
Advertisement

Puttur:  ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲಾ ಜಗಲಿಯಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿಯ ಕೊಲೆ ಪ್ರಕರಣವನ್ನು ಭೇದಿಸಿರುವ ಸುಳ್ಯ ಪೊಲೀಸರು ಕೃತ್ಯ ಎಸಗಿದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ಕಡಬ ತಾಲೂಕಿನ ಎಡಮಂಗಲದ ಉದಯ ಕುಮಾರ್ ನಾಯ್ಕ್ (35) ಬಂಧಿತ ಆರೋಪಿ. ರವಿವಾರ ರಾತ್ರಿ ವಿರಾಜಪೇಟೆಯ ವಸಂತ (45) ಎಂಬ ವ್ಯಕ್ತಿಯ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈಯಲಾಗಿತ್ತು. ಸೋಮವಾರ ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ.

ಉದಯ ಕುಮಾರ್ ಗೆ ಬಾರೊಂದರಲ್ಲಿ ವಸಂತ ಎಂಬಾತನ ಪರಿಚಯವಾಗಿದ್ದು, ರವಿವಾರ ರಾತ್ರಿ ಕಾಂತಮಂಗಲಕ್ಕೆ ಅಟೋ ರಿಕ್ಷಾದಲ್ಲಿ ಬಂದು ಶಾಲಾ ಜಗಲಿಯಲ್ಲಿ ಮಲಗಿದ್ದರು. ವಸಂತ ಎಂಬವರ ಬಳಿ 800 ರೂ. ಹಣ ಇರುವುದನ್ನು ಗಮನಿಸಿ ಉದಯ ಆತನ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದು, ಕೊಲೆ ಮಾಡಿದ ಬಳಿಕ ಬೆಳಿಗ್ಗೆ ಹಣ ಹಾಗೂ ಮೊಬೈಲ್ ನೊಂದಿಗೆ ಅಲ್ಲಿಂದ ಪರಾರಿಯಾಗಿದ್ದರು. ತನಿಖೆಗಿಳಿದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯೂ ಮನೆಗೆ ತೆರಳದೇ ಎಲ್ಲಂದರಲ್ಲಿ ಇರುತ್ತಿದ್ದುದು ಬೆಳಕಿಗೆ ಬಂದಿತ್ತು.

Advertisement

ಎಸ್.ಪಿ.ರಿಷ್ಯಂತ್ ಸಿ.ಬಿ., ಎ.ಎಸ್.ಪಿ. ರಾಜೇಂದ್ರ ಡಿ.ಎಸ್., ಪುತ್ತೂರು ಡಿವೈಎಸ್ಪಿ ಅರುಣ್ ನಾಗೇಗೌಡ ಮಾರ್ಗದರ್ಶನದಲ್ಲಿ ಸುಳ್ಯ ವೃತ್ತ ನಿರೀಕ್ಷಕ ಸತ್ಯನಾರಾಯಣ ನೇತೃತ್ವದಲ್ಲಿ ಪುತ್ತೂರು ಇನ್ಸ್ ಪೆಕ್ಟರ್ ಸತೀಶ್ ಜೆ.ಜೆ., ಸುಳ್ಯ ಎಸೈ ಮಹೇಶ್, ಸುಬ್ರಹ್ಮಣ್ಯ ಎಸೈ ಕಾರ್ತಿಕ್, ಸಿಬ್ಬಂದಿಗಳಾದ ಉದಯ್ ಗೌಡ, ಪ್ರಕಾಶ್, ಉದಯ್, ಅನಿಲ್ ಸೇರಿದಂತೆ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Uppinangady: ಮಲಗಿದ್ದ ಮಹಿಳೆ ಕೊಲೆ ಪ್ರಕರಣದಲ್ಲಿ ಟ್ವಿಸ್ಟ್‌; ಹತ್ತನೇ ತರಗತಿ ಬಾಲಕನ ಬಂಧನ

Advertisement
Advertisement
Advertisement