Puttur sub-division DySP transfer: ಪುತ್ತೂರು ಉಪವಿಭಾಗದ ಡಿವೈಎಸ್ಪಿ ಡಾ.ಗಾನಾ ಪಿ.ಕುಮಾರ್ ಲೋಕಾಯುಕ್ತಕ್ಕೆ ವರ್ಗಾವಣೆ : ಪುತ್ತೂರಿಗೆ ಅರುಣ್ ನಾಗೇಗೌಡ
Puttur sub-division DySP transfer: ಪುತ್ತೂರು:ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ಗಾನಾ ಪಿ.ಕುಮಾರ್ ಅವರನ್ನು ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸಿ(Puttur sub-division DySP transfer) ಸರಕಾರ ಆದೇಶಿಸಿದೆ ಎಂದು ವರದಿಯಾಗಿದೆ.
ರಾಜ್ಯ ಗುಪ್ತ ವಾರ್ತೆಗೆ ವರ್ಗಾವಣೆ ಆದೇಶದಲ್ಲಿರುವ ಅರುಣ್ ನಾಗೇಗೌಡ ಅವರನ್ನು ಪುತ್ತೂರು ಡಿವೈಎಸ್‌ಪಿಯಾಗಿ ವರ್ಗಾವಣೆಗೊಳಿಸಲಾಗಿದೆ.
ಈ ಹಿಂದೆ ಎರಡು ವರ್ಷಗಳ ಕಾಲ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ.ಗಾನಾ ಪಿ.ಕುಮಾರ್ ಅವರನ್ನು ಸರಕಾರ ಸಿಐಡಿಗೆ ವರ್ಗಾವಣೆಗೊಳಿಸಿತ್ತು.ಆ ಬಳಿಕ ಅವರ ವರ್ಗಾವಣೆ ರದ್ದುಗೊಳಿಸಿ ಎಸ್ಪಿ ಕಚೇರಿಯ ಡಿಸಿಆರ್‌ಬಿ ಡಿವೈಎಸ್ಪಿಯಾಗಿ ನಿಯೋಜಿಸಲಾಗಿತ್ತು.ಪುತ್ತೂರಿನಲ್ಲಿ ನಡೆದ ಬ್ಯಾನರ್ ಪ್ರಕರಣವೊಂದಕ್ಕೆ ಸ೦ಬ೦ಧಿಸಿ ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸಿದ್ದ ಆರೋಪದಲ್ಲಿ ಪುತ್ತೂರಿನ ಆಗಿನ ಡಿವೈಎಸ್ಪಿಯಾಗಿದ್ದ ಡಾ|ವೀರಯ್ಯ ಹಿರೇಮಠ ಅವರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಿದ್ದ ಸಂದರ್ಭ ಪ್ರಭಾರ ಡಿವೈಎಸ್ಪಿಯಾಗಿ ಡಾ.ಗಾನಾ ಪಿ.ಕುಮಾರ್ ಅವರನ್ನು ನಿಯೋಜಿಸಲಾಗಿತ್ತು.
ಬಳಿಕ ಅವರನ್ನೇ ಪುತ್ತೂರು ಡಿವೈಎಸ್ಪಿಯಾಗಿ ಮುಂದುವರಿಸಲಾಗಿತ್ತು. ಇದೀಗ ಅವರನ್ನು ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಸೌಜನ್ಯಾ ಹೋರಾಟಗಾರರಿಗೆ ಕಿರುಕುಳ ನೀಡುತ್ತಿದ್ದ ಬಂಟ್ವಾಳ ವ್ಯಾಪ್ತಿಯ ಪ್ರತಾಪ್ ಸಿಂಗ್ ಥೋರಟ್ ಕಿಕ್ ಔಟ್ !