R Ashok: ಹೋಮ್ ಮಿನಿಸ್ಟರ್ ಯಾರು ಅನ್ನೋದೇ ಗೊತ್ತಾಗ್ತಾ ಇಲ್ಲ: ಆರ್. ಅಶೋಕ್
R Ashok: ಬೆಂಗಳೂರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎನ್ನುವುದು ಎಷ್ಟು ಹದಗೆಟ್ಟು ಹೋಗಿದೆ ಎಂದರೆ, ಹೋಮ್ ಮಿನಿಸ್ಟರ್ ಯಾರು ಅನ್ನೋದೇ ಗೊತ್ತಾಗ್ತಾ ಇಲ್ಲ. ಹೆಣ್ಣು ಮಕ್ಕಳು ಶಾಲೆಗೆ ಹೋದರೆ, ಮಹಿಳೆಯರು ಕೆಲಸಕ್ಕೆ ಹೋದರೆ ಮನೆಗೆ ವಾಪಸ್ ಬರುವ ಗ್ಯಾರಂಟಿಯೇ ಇಲ್ಲ ಎಂದು ಪ್ರತಿಪಕ್ಷ ನಾಯಕರಾದ ಆರ್ ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: Kasaragod: ನಾಪತ್ತೆಯಾಗಿದ್ದ ಶಿಕ್ಷಕಿ ಅನ್ಯಕೋಮಿನ ಯುವಕನ ಜೊತೆ ವಿವಾಹವಾಗಿ ಪತ್ತೆ; ಲವ್‌ಜಿಹಾದ್ ಆರೋಪ
ಶಿವರಾಮೇಗೌಡ ಎನ್ನುವ ವ್ಯಕ್ತಿ ಹೇಳುತ್ತಾನೆ.. ಮೋದಿಗೆ ಹೇಳಿ ಜೆಡಿಎಸ್ -ಬಿಜೆಪಿ ಭಾಗ ಮಾಡಿಬಿಟ್ಟರೆ ನಮಗೆ ಒಳ್ಳೆಯದು. ಇವರೆಂಥಾ ಚಂಡಾಳರು ಎನ್ನುವುದು ಇದರಿಂದ ಗೊತ್ತಾಗುತ್ತದೆ. ಮುಂದಿನ ವಿಧಾನಸಭೆ ಚುನಾವಣೆವರೆಗೂ ಇವರು ಒಂದಾಗಿದ್ದರೆ ನಮಗೆ ಉಳಿಗಾಲ ಇಲ್ಲ ಎನ್ನುವುದು ಅವರ ಹೆದರಿಕೆ ಎಂದು ಅವರು ಲೇವಡಿ ಮಾಡಿದರು.
ಇದನ್ನೂ ಓದಿ: Rahul Gandhi: ಭಾಷಣ ಮಾಡುತ್ತಲೇ ಸೆಖೆ ಎಂದು ತಲೆ ಮೇಲೆ ನೀರು ಸುರಿದುಕೊಂಡ ರಾಹುಲ್ ಗಾಂಧಿ !!
ಇವರು ಕುಮಾರಸ್ವಾಮಿ ಅವರ ಬೆನ್ನಿಗೆ ಚೂರಿ ಹಾಕಿದರು ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅಶೋಕ್ ಅವರು; ಕೆಲಸ ಆಗಬೇಕಾದರೆ ಕೈ ಎತ್ತು. ಕೆಲಸ ಆದ ಮೇಲೆ ಚೂರಿ ಹಾಕು. ಇದೇ ಕಾಂಗ್ರೆಸ್ ನೀತಿ. ನಾನು ಹದಿನಾಲ್ಕು ತಿಂಗಳು ದುಷ್ಟರ ಸಹವಾಸ ಮಾಡಿದ್ದೆ, ಅವರು ನನ್ನನ್ನು ಕ್ಲರ್ಕ್, ಜವಾನನ ರೀತಿ ನಡೆಸಿಕೊಂಡರು ಎಂದರು.
ಕಾಂಗ್ರೆಸ್ ಸರಕಾರ ಎಲ್ಲ ಕಡೆ ಲೂಟಿ ಮಾಡುತ್ತಿದೆ. ಈಗ ಬಿಡಿಎ ಕಾಂಪ್ಲೆಕ್ಸ್ ಗಳನ್ನು ಮಾರಾಟಕ್ಕೆ ಇಟ್ಟಿದೆ. ಹಿಂದೆ ಲಕ್ಷ್ಮಣರಾವ್ ಅವರಂಥ ಮಹಾನುಭಾವರು ಇವನ್ನೆಲ್ಲ ಕಾಪಾಡಿಕೊಂಡು ಬಂದಿದ್ದರು. ಸರ್ಕಾರದಲ್ಲಿ ಹಣ ಇಲ್ಲ. ಅವರ ವರಿಷ್ಠರಿಗೆ ಕಪ್ಪ ಕೊಡಲು ಇಲ್ಲಿ ಲೂಟಿ ಮಾಡಲು ಹೊರಟಿದ್ದಾರೆ ಎಂದು ಅಶೋಕ್ ಟೀಕಿಸಿದರು.