Lok Sabha Election 2024: ನಾಮಪತ್ರ ಸಲ್ಲಿಕೆಗೆ ಮೊದಲು ಅಯೋಧ್ಯೆ ಶ್ರೀರಾಮನ ದರ್ಶನ ಪಡೆಯಲಿರುವ ರಾಹುಲ್-ಪ್ರಿಯಾಂಕಾ ಗಾಂಧಿ
Lok Sabha Election 2024: ನಾಳೆ ಹಲವು ರಾಜ್ಯಗಳಲ್ಲಿ ನಾಳೆ ಎರಡನೇ ಹಂತದ ಮತ್ತು ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ಎಂದು ವರದಿಯೊಂದು ಪ್ರಕಟ ಮಾಡಿದೆ.
ಇದನ್ನೂ ಓದಿ: Deadly Accident: ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ ; ಆರು ಮಂದಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಾಯ
ನಾಳೆ ಶುಕ್ರವಾರ ಎರಡನೇ ಹಂತದ ಮತದಾನ ನಡೆಯಲಿದ್ದು, ಕೇರಳದ ವಯನಾಡಿನಲ್ಲೂ ಮತದಾನ ನಡೆಯಲಿದೆ. ಈ ಕ್ಷೇತ್ರದಲ್ಲಿ ರಾಹುಲ್‌ಗಾಂಧಿ ಚುನಾವಣಾ ಕಣದಲ್ಲಿದ್ದಾರೆ. ಇವರು ಕನ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ನಾಯಕಿ ಅನ್ನಿ ರಾಜಾ ಅವರನ್ನು ಎದುರಿಸಲಿರುವುದರಿಂದ ಉತ್ತರ ಪ್ರದೇಶದ ಎರಡು ಹೈಪ್ರೊಫೈಲ್ ಕ್ಷೇತ್ರಗಳಾದ ರಾಯ್ ಬರೇಲಿ ಮತ್ತು ಅಮೇಥಿಯ ಮೇಲೆ ಎಲ್ಲರ ಕಣ್ಣು ಬಿದ್ದಿದೆ.
ಇದನ್ನೂ ಓದಿ: Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾಗೆ ನೋಟಿಸ್
ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಈ ಎರಡು ಸ್ಥಾನಗಳಿಗೆ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇದರ ಅಧಿಕೃತ ಘೋಷಣೆ ಎ.30 ರ ಮೊದಲು ಮಾಡಲಾಗುವುದಿಲ್ಲ ಎಂದು ಹೇಳಲಾಗಿದೆ.
ಈತನ್ಮಧ್ಯೆ ಅಮೇಥಿ ಮತ್ತು ರಾಯ್‌ಬರೇಲಿಗೆ ಹೋಗುವ ಮೊದಲು ರಾಹುಲ್, ಪ್ರಿಯಾಂಕಾ ಇಂದು ಅಯೋಧ್ಯೆಗೆ ಹೋಗಬಹುದು ಎನ್ನಲಾಗಿದೆ. ಇದು ಅಧಿಕೃತವಾಗಿ ದೃಢಪಟ್ಟಿಲ್ಲ.