ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

School Admission: ಶಾಲಾ ದಾಖಲಾತಿಗೆ ಗರಿಷ್ಠ ವಯೋಮಿತಿ ಅಧಿಕೃತ ನಿಯಮ ಜಾರಿ: ಇನ್ಮುಂದೆ ಈ ನಿಯಮ ಮೀರಿದ್ರೆ 1ನೇ ತರಗತಿ ಪ್ರವೇಶವಿಲ್ಲ

School Admission: ಡ್ರಾಪ್‌ಔಟ್‌ ಆಗುವ ಮಕ್ಕಳ ಸಂಖ್ಯೆಯನ್ನು ತಗ್ಗಿಸುವ ಉದ್ದೇಶದಿಂದ ಸರ್ಕಾರವು ಹೊಸ ರೂಲ್ಸ್ ಜಾರಿ ತಂದಿದೆ.
10:59 AM Jul 19, 2024 IST | ಕಾವ್ಯ ವಾಣಿ
UpdateAt: 10:59 AM Jul 19, 2024 IST
Advertisement

School Admission: ಡ್ರಾಪ್‌ಔಟ್‌ ಆಗುವ ಮಕ್ಕಳ ಸಂಖ್ಯೆಯನ್ನು ತಗ್ಗಿಸುವ ಉದ್ದೇಶದಿಂದ ಸರ್ಕಾರವು ಹೊಸ ರೂಲ್ಸ್ ಜಾರಿ ತಂದಿದೆ. ಮಕ್ಕಳನ್ನು ಎಲ್‌ಕೆಜಿ, ಯುಕೆಜಿ (LKG, UKG) ಹಾಗೂ ಒಂದನೇ ತರಗತಿಗೆ ದಾಖಲಿಸಲು (Karnataka Government) ಈಗಾಗಲೇ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಿದೆ.ಈ ಹಿನ್ನೆಲೆ ಎಲ್ ಕೆಜಿ, ಯುಕೆಜಿ ಹಾಗೂ 1ನೇ ತರಗತಿ ಪ್ರವೇಶಾತಿಗೆ (School Admission)ಗರಿಷ್ಠ ವಯೋಮಿತಿ ಗೊಂದಲಕ್ಕೆ ಶಿಕ್ಷಣ ಇಲಾಖೆ ಅಧಿಕೃತ ತೆರೆ ಎಳೆದಿದೆ.

Advertisement

ಹೌದು, ಇನ್ನುಮುಂದೆ ಎಲ್ ಕೆಜಿ, ಯುಕೆಜಿ ಹಾಗೂ 1ನೇ ತರಗತಿ ಮಕ್ಕಳ ಪ್ರವೇಶಕ್ಕೆ ವಯೋಮಿತಿ ನಿಗದಿ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಎಲ್ ಕೆಜಿ ಪ್ರವೇಶಕ್ಕೆ ಗರಿಷ್ಠ ವಯೋಮಿತಿ 4ರಿಂದ 6 ವರ್ಷ, ಯುಕೆಜಿ ಪ್ರವೇಶಕ್ಕೆ 5ರಿಂದ 7 ವರ್ಷ ನಿಗದಿ ಮಾಡಲಾಗಿದೆ.

ಇನ್ನು 1ನೇ ತರಗತಿ ಪ್ರವೇಶಕ್ಕೆ ಗರಿಷ್ಠ ವಯೋಮಿತಿ 6ರಿಂದ 8 ವರ್ಷ ನಿಗದಿ ಪಡಿಸಲಾಗಿದೆ.  ಈ ಹಿನ್ನೆಲೆ ಇನ್ಮುಂದೆ 8 ವರ್ಷ ಮೀರಿದ್ರೆ 1ನೇ ತರಗತಿ ಪ್ರವೇಶವಿರುವುದಿಲ್ಲ. 8 ವರ್ಷ ಮೀರಿದ ಶಾಲೆಗೆ ಸೇರದ ಮಕ್ಕಳನ್ನು ಶಾಲೆ ಬಿಟ್ಟ ಮಕ್ಕಳು ಎಂದು ಪರಿಗಣಿಸಲಾಗುತ್ತದೆ. ಅಲ್ಲದೇ ಅಂತಹ ಮಕ್ಕಳನ್ನು ಅವರ ವಯಸ್ಸಿಗೆ ತಕ್ಕಂತೆ ತರಗತಿಗಳ ಪ್ರವೇಶ ನೀಡಲಾಗುತ್ತದೆ. ಈ ಮೂಲಕ ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು ಇದ್ದ ವಯೋಮಿತಿ ಗೊಂದಲ ನಿವಾರಣೆಯದಂತಾಗಿದೆ.

Advertisement

Mangaluru: ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿ ಮೇಲೆ ಲೋಕಾಯುಕ್ತ ರೈಡ್

Related News

Advertisement
Advertisement