School Holiday: ಭಾರೀ ಮಳೆ: ದ.ಕ ಜಿಲ್ಲೆಯ ಈ ತಾಲೂಕುಗಳಿಗೆ ನಾಳೆ (ಜು.19) ರಜೆ ಘೋಷಣೆ
School Holiday: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿರುವುದರಿಂದ ಜಿಲ್ಲಾಡಳಿತ ಮುನ್ನೆಚ್ಚರಿಕ ಕ್ರಮವಾಗಿ ನಾಳೆ (ಜುಲೈ 19) ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳ ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.
ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮೂಲ್ಕಿ ತಾಲೂಕುಗಳ ಶಾಲಾ ಕಾಲೇಜುಗಳು ಎಂದಿನಂತೆ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ದಿನಾಂಕ 19-07-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯ (ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಿಗೆ) ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು (12ನೇ ತರಗತಿವರೆಗೆ) ದಿನಾಂಕ: 19-07-2024 ರಂದು ರಜೆಯನ್ನು ಘೋಷಿಸಲಾಗಿದೆ.
ರಜೆ ನೀಡಿರುವ ಸದ್ರಿ ತಾಲೂಕುಗಳಲ್ಲಿ ಸಂಬಂಧಪಟ್ಟ ವಿದ್ಯಾ ಸಂಸ್ಥೆಗಳು ಅವಕಾಶವಿದ್ದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಆನ್ ಲೈನ್ ತರಗತಿಯನ್ನು ನಡೆಸಬಹುದರಾಗಿರುತ್ತದೆ.
ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು,
ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.
ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಮತ್ತು ವಿದ್ಯುತ್ ಕಂಬ/ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸುವುದು.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು.