For the best experience, open
https://m.hosakannada.com
on your mobile browser.
Advertisement

School Holiday: ಮುಂದುವರಿದ ವರುಣನ ಅಬ್ಬರ; ನಾಳೆ (ಜು.16) ದ.ಕ, ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Udupi: ಭಾರೀ ಮಳೆಯ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ದ.ಕ ಮತ್ತು ಉಡುಪಿ ಜಿಲ್ಲಾದ್ಯಂತ ಅಂಗನವಾಡಿ, ಶಾಲೆಗಳು ಮತ್ತು ಪಿಯುಸಿವರೆಗೆ ಜು. 16 ( ಮಂಗಳವಾರ) ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
07:37 PM Jul 15, 2024 IST | ಸುದರ್ಶನ್
UpdateAt: 07:52 PM Jul 15, 2024 IST
school holiday  ಮುಂದುವರಿದ ವರುಣನ ಅಬ್ಬರ  ನಾಳೆ  ಜು 16  ದ ಕ  ಉಡುಪಿ ಜಿಲ್ಲೆಯ ಶಾಲೆ  ಪಿಯು ಕಾಲೇಜುಗಳಿಗೆ ರಜೆ ಘೋಷಣೆ
Advertisement

School Holiday: ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದ್ದು, ಈ ಕಾರಣದಿಂದ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲಾದ್ಯಂತ ಅಂಗನವಾಡಿ, ಶಾಲೆಗಳು, ಪಿಯುಸಿವರೆಗೆ ಜುಲೈ 16 (ನಾಳೆ) ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.

Advertisement

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌, ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರು ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಿದ್ದಾರೆ. ನದಿಗಳು ಉಕ್ಕಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಭಾರೀ ಮಳೆ ಸುರಿಯುತ್ತಿದೆ.

ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದಿರುವ ಹಿನ್ನೆಲೆ ಇಲಾಖೆಯ ಉಪ ನಿರ್ದೇಶಕರಾದ ಕೆ.ಮಂಜುಳಾ ಅವರು ನಾಳೆ (ಮಂಗಳವಾರ) ಪದವಿ ಪೂರ್ವ ಇಲಾಖೆ ವ್ಯಾಪ್ತಿಯಲ್ಲಿರುವ ಕೊಡಗು ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

Advertisement

Advertisement
Advertisement
Advertisement