For the best experience, open
https://m.hosakannada.com
on your mobile browser.
Advertisement

Udupi: ಉಡುಪಿಯಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯಂತೆ ಭಯಾನಕ ಕೃತ್ಯ - ಬೆಳಕಿಗೆ ಬಂದಿದ್ದೇ ರೋಚಕ !!

Udupi: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಂತೆ ಇದೇ ಮಾದರಿಯ ಘಟನೆಯೊಂದು ಉಡುಪಿಯಲ್ಲೊಂದು ಭಯಾನಕ ಕೃತ್ಯ ಬೆಳಕಿಗೆ ಬಂದಿದೆ.
02:33 PM Jun 03, 2024 IST | ಸುದರ್ಶನ್
UpdateAt: 02:33 PM Jun 03, 2024 IST
udupi  ಉಡುಪಿಯಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯಂತೆ ಭಯಾನಕ ಕೃತ್ಯ   ಬೆಳಕಿಗೆ ಬಂದಿದ್ದೇ ರೋಚಕ
Advertisement

Udupi: ದೇಶಾದ್ಯಂತ ಸಂಚಲನ ಸೃಷ್ಟಿಸಿದ ಹಾಸನ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಪ್ರಕರಣ, ಪ್ರಜ್ವಲ್ ಸೆರೆಂಡರ್ ಆಗುವ ಮೂಲಕ ಒಂದು ಹಂತಕ್ಕೆ ಸುಧಾರಿಸಿದೆ. ಆದರೀಗ ಈ ಪ್ರಕರಣ ತನಿಖೆಯ ಹಂತದಲ್ಲಿರುವಾಗಲೇ ಇದೇ ಮಾದರಿಯಲ್ಲಿ ಉಡುಪಿಯಲ್ಲೊಂದು ಭಯಾನಕ ಕೃತ್ಯ ಬೆಳಕಿಗೆ ಬಂದಿದೆ.

Advertisement

ಇದನ್ನೂ ಓದಿ: Hassan Lokasabha: ಹಾಸನದಲ್ಲಿ ಪ್ರಜ್ವಲ್ ಗೆ ಸೋಲೋ? ಗೆಲುವೋ? ಸಮೀಕ್ಷೆಗಳು ಹೇಳೋದೇನು?

ಹೌದು, ಉಡುಪಿಯ(Udupi) ಕುಂದಾಪುರ(Kumdapura) ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಈ ಕೃತ್ಯ ಬೆಳಕಿಗೆ ಬಂದಿದ್ದು, ಉದ್ಯಮಿಯಾಗಿರುವ ಶ್ರೇಯಸ್ ನಾಯ್ಕ(Shreyas Nayka) (25) ಎಂಬ ಆರೋಪಿ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ, ಅಲ್ಲದೆ ಆತ ಲೈಂಗಿಕ ದೌರ್ಜನ್ಯದ ವಿಡಿಯೋ ಮಾಡಿ ಬ್ಲಾಕ್ ಮೈಲ್ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಸದ್ಯ ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾನೆಂದು ತಿಳಿದುಬಂದಿದೆ.

Advertisement

ಏನಿದು ಪ್ರಕರಣ?
ಶ್ರೇಯಸ್ ನಾಯ್ಕ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರನ್ನು ತನ್ನ ಭೋಗಕ್ಕೆ ಬಳಸುತ್ತಿದ್ದ. ಅಲ್ಲದೆ ಲೈಂಗಿಕ ದೌರ್ಜನ್ಯ ಎಸಗುವ ದೃಶ್ಯಗಳನ್ನು ಸೆರೆ ಹಿಡಿದು ತನ್ನ ಖಾಸಗಿ ಲ್ಯಾಪ್​ಟಾಪ್​ನಲ್ಲಿ ಇರಿಸಿಕೊಳ್ಳುತ್ತಿದ್ದ. ಈತ ಶಾಲೆ, ಕಾಲೇಜು ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ.

ಸಿಕ್ಕಿಬಿದ್ದದ್ದು ಹೇಗೆ?
ಈತ ಬಾಲಕಿಯೊಬ್ಬಳ ಮೇಲೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ಎಸಗಿದ್ದಾನೆ. ಹಾಲಾಡಿ(Haladi) ರಸ್ತೆ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಅತ್ಯಾಚಾರದ ದೃಶ್ಯ ಸೆರೆ ಹಿಡಿದು ಬ್ಲ್ಯಾಕ್ ಮೇಲ್ ಮಾಡಿ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭವತಿ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿ ಎಸ್ಕೇಪ್:
ಥೇಟ್ ಪ್ರಜ್ವಲ್ ರೇವಣ್ಣ ಮಾದರಿಯಲ್ಲೇ ವಿಡಿಯೋ ಮಾಡಿಕೊಳ್ಳುತ್ತಿದ್ದ ವಿಕೃತ ಕಾಮಿ ವಿರುದ್ಧ ಮೇ 18 ರಂದು ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾನೆ. ಸದ್ಯ ಪೋಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.

ಇದನ್ನೂ ಓದಿ: Prajwal Revanna: ಪ್ರಜ್ವಲ್ ಡಿಮ್ಯಾಂಡ್ ಕೇಳಿ SIT ಶಾಕ್ - ಪ್ರಜ್ವಲ್ ಕೇಳಿದ್ದಾದ್ರೂ ಏನು?

Advertisement
Advertisement
Advertisement