ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

HSRP ಕುರಿತು ಸಿಹಿ ಸುದ್ದಿ ಹಂಚಿಕೊಂಡ ಸಾರಿಗೆ ಇಲಾಖೆ!!

HSRP ನಂಬರ್‌ ಪ್ಲೇಟ್ ಅಳವಡಿಸಲು ಸಾರಿಗೆ ಇಲಾಖೆ ಮೂರು ತಿಂಗಳು ಕಾಲಾವಕಾಶ ನೀಡಿದೆ. ಅಂದರೆ ಮೇ 31 ಕೊನೆಯ ದಿನಾಂಕ ನಿಗದಿ ಮಾಡಿ ಆದೇಶ ಹೊರಡಿಸಿದೆ
01:27 PM Apr 24, 2024 IST | ಸುದರ್ಶನ್
UpdateAt: 01:31 PM Apr 24, 2024 IST

HSRP ನಂಬರ್‌ ಪ್ಲೇಟ್ ಅಳವಡಿಸಲು ಸಾರಿಗೆ ಇಲಾಖೆ ಮೂರು ತಿಂಗಳು ಕಾಲಾವಕಾಶ ನೀಡಿದೆ. ಅಂದರೆ ಮೇ 31 ಕೊನೆಯ ದಿನಾಂಕ ನಿಗದಿ ಮಾಡಿ ಆದೇಶ ಹೊರಡಿಸಿದೆ. ಈ ಗಡುವು ಮುಕ್ತಾಯದತ್ತ ಬಂದಿದೆ. ಈ ನಡುವೆ ಸಾರಿಗೆ ಇಲಾಖೆಯು(Transportation Department) HSRP ಕುರಿತು ಸಿಹಿ ಸುದ್ದಿ ಹಂಚಿಕೊಂಡಿದೆ.

Advertisement

ಇದನ್ನೂ ಓದಿ:  Fasting Health Benefits: ಉಪವಾಸ ಮಾಡುವುದರಿಂದಾಗುವ ಆರೋಗ್ಯ ಪ್ರಯೋಜನಗಳಿವು : ಉಪವಾಸ ಅಗತ್ಯವೇ?

ಹೌದು, ದೇಶಾದ್ಯಂತ ಏಕೀಕೃತ ವಾಹನ ನೋಂದಣಿ ಸಂಖ್ಯೆ ಫಲಕ ಅಳವಡಿಕೆ ಹಾಗೂ ವಾಹನಗಳ ಸುರಕ್ಷತೆ ದೃಷ್ಟಿಯಿಂದಾಗಿ ಸಾರಿಗೆ ಇಲಾಖೆ 2019ರ ಏಪ್ರಿಲ್‌ಗಿಂತ ಹಿಂದೆ ನೋಂದಣಿಯಾದ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. ಫೆಬ್ರವರಿ 17 HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಲು ಕೊನೆಯ ದಿನಾಂಕ ಎಂದಿದ್ದ ಸಾರಿಗೆ ಇಲಾಖೆಯು ದಿನದಿಂದ ದಿನಕ್ಕೆ ರಾಜ್ಯದಲ್ಲಿ ಹೈ ಸೆಕ್ಯೂರಿಟಿ ನಂಬರ್‌ ಪ್ಲೇಟ್‌ (ಎಚ್‌ಎಸ್‌ಆರ್‌ಪಿ) ಅಳವಡಿಕೆ ಏರಿಕೆ ಕಾಣುತ್ತಿದ್ದ ಕಾರಣ ಅದನ್ನು ಮೇ 31 ರ ತನಕ ವಿಸ್ತರಿಸಿದೆ.

Advertisement

ಇದನ್ನೂ ಓದಿ:  Government Job: ಈ ಕೋರ್ಸ್ ಮಾಡಿದ್ರೆ ಸಾಕು, ಸರ್ಕಾರಿ ನೌಕರಿ ಸಿಗೋದು ಫಿಕ್ಸ್!

ಈ ಬಗ್ಗೆ ಪ್ರತಿಕ್ರಿಯಿಸಿದ ಸಾರಿಗೆ ಇಲಾಖೆ ಆಯುಕ್ತ ಸಿ. ಮಲ್ಲಿಕಾರ್ಜುನ ಅವರು 'ಈ ತನಕ ರಾಜ್ಯದಲ್ಲಿ 34 ಲಕ್ಷ ವಾಹನಗಳಿಗೆ ಹೆಚ್‌ಎಸ್ಆರ್‌ಪಿ ನೋಂದಣಿ ಮಾಡಲಾಗಿದೆ. ಎರಡು ಬಾರಿ ಗಡುವು ವಿಸ್ತರಣೆ ಮಾಡಿದರೂ ಸಹ ನಂಬರ್ ಪ್ಲೇಟ್ ಅಳವಡಿಕೆ ಕಡಿಮೆ ಪ್ರಮಾಣದಲ್ಲಿ ಆಗಿದೆ. ಫೆಬ್ರವರಿ ತಿಂಗಳ ವೇಳೆಗೆ ಸುಮಾರು 18 ಲಕ್ಷ ವಾಹನಗಳು ನೋಂದಣಿಯಾಗಿತ್ತು. ಏಪ್ರಿಲ್ ತಿಂಗಳ ವೇಳೆಗೆ ಈ ಸಂಖ್ಯೆ ದುಪ್ಪಟ್ಟಾಗಿದೆ ಎಂದು ಸಿಹಿ ಸುದ್ದಿ ನೀಡಿದ್ದಾರೆ.

ಮೇ 31 ರ ಬಳಿಕವೂ HARP ನಂಬರ್ ಪ್ಲೇಟ್ ಅಳವಡಿಸದಿದ್ದರೆ ಬೀಳುತ್ತೆ ಭಾರೀ ದಂಡ:

HSRP Number Plate ಇಲ್ಲದ ವಾಹನ ಮಾಲೀಕರೆ ಎಚ್ಚರ. ಯಾಕೆಂದರೆ ನೀವು ಈ ನಂಬರ್ ಪ್ಲೇಟ್ ಅಳವಡಿಸದೆ ಮೊದಲ ಬಾರಿಗೆ ರಸ್ತೆಗಿಳಿದರೆ 1000 ದಂಡ ಪಾವತಿಸಬೇಕು. ಇದರಿಂದಲೂ ಎಚ್ಚರಗೊಳ್ಳದೆ ನಂಬರ್ ಪ್ಲೇಟ್ ಹಾಕಿಸದೆ ಎರಡನೇ ಬಾರಿ ರಸ್ತೆಗಿಳಿದರೆ 2000 ಹಾಗೂ ಪದೇ ಪದೇ ಇದೆ ತಪ್ಪಾದರೆ ಇನ್ ಹೆಚ್ಚಿನ ದಂಡ ವಿಧಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ. ಹೀಗಾಗಿ ದಯವಿಟ್ಟು ಎಲ್ಲರೂ ಮೇ 31ರ ಒಳಗೆ ಸರ್ಕಾರದ ಸೂಚನೆಂತೆ HSRP ಅಳವಡಿಸಿ.

HSRP ನಂಬರ್ ಪ್ಲೇಟ್ ಪಡೆಯುವುದು ಹೇಗೆ?

ಮೊದಲಿಗೆ https://transport.karnataka.gov.in ಅಥವಾ www.siam.in ಗೆ ಭೇಟಿ ನೀಡಿ ನಂತರ Book HSRP ನ್ನು ಕ್ಲಿಕ್‌ ಮಾಡಿ.

• ವಾಹನ ತಯಾರಕರನ್ನು ಆಯ್ಕೆ ಮಾಡಿ

• ವಾಹನದ ಮೂಲ ವಿವರ ಭರ್ತಿ ಮಾಡಿ

• ಡೀಲರ್‌ ಸ್ಥಳವನ್ನು ಆಯ್ಕೆ ಮಾಡಿ (HSRP ಅಳವಡಿಕೆಗೆ ನಿಮ್ಮ ಅನುಕೂಲಕ್ಕೆ ತಕ್ಕಂತೆ)

• HSRP ಶುಲ್ಕವನ್ನು ನಗದು ರೂಪದಲ್ಲಿ ಪಾವತಿ ಮಾಡಲು ಅವಕಾಶವಿಲ್ಲ, ಹಾಗಾಗಿ ಆನ್‌ಲೈನ್‌ನಲ್ಲಿ ಪಾವತಿಸಿ.

• ಆವಾಗ, ವಾಹನ ಮಾಲೀಕರ ಮೊಬೈಲ್‌ ಸಂಖ್ಯೆಗೆ ಒಟಿಪಿ ರವಾನಿಸಲಾಗುವುದು.

• ನಿಮಗೆ ಯಾವಗ ಸೂಕ್ತ ಅನಿಸುತ್ತದೆಯೋ ಅದಕ್ಕೆ ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಿ

• ನಂತರ ನಿಮ್ಮ ವಾಹನದ ಯಾವುದೇ ತಯಾರಕ/ ಡೀಲರ್‌ ಸಂಸ್ಥೆಗೆ ಭೇಟಿ ನೀಡಿ.

Advertisement
Advertisement
Next Article