Rain Alert: ಕರ್ನಾಟಕದ ಈ ಭಾಗಗಳಲ್ಲಿ ಭಾರೀ ಮಳೆ ಸಾಧ್ಯತೆ !!
Weather Update: ರಾಜ್ಯದ ಕೆಲವೆಡೆ ಮಳೆರಾಯ ದರ್ಶನ ನೀಡಿದ್ದು, ಇನ್ನೂ ಕೆಲವೆಡೆ ವರುಣನ ಆರ್ಭಟ ಜೋರಾಗಿರಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಸೇರಿದಂತೆ ಕೆಲವೆಡೆ ಗುಡುಗು-ಸಿಡಿಲಿನಿಂದ ಕೂಡಿದ ಭಾರೀ ಮಳೆಯಾಗಿದೆ. ಈ ನಡುವೆ, ಬೆಂಗಳೂರಿಗೆ(Weather Update) ಹವಾಮಾನ ಇಲಾಖೆ(IMD)ಮಳೆಯ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು ಹಾಗೂ ಮಲೆನಾಡಿನ ಎಲ್ಲಾ ಜಿಲ್ಲೆಗಳಿಗೂ ಮುಂದಿನ ಐದೂ ದಿನ ಅಂದರೆ ಡಿಸೆಂಬರ್ 5ರ ವರೆಗೆ ಭಾರೀ ಮಳೆಯಾಗುವ (Rain)ಸಂಭವವಿದೆ.ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ರಾಮನಗರ, ವಿಜಯನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ವರುಣನ ಅಬ್ಬರ ಜೋರಾಗಿರುವ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಡಿಸೆಂಬರ್ 5 ರವರೆಗೂ ಕರಾವಳಿ ಜಿಲ್ಲೆಗಳಾದ ದಕ್ಷಿಣ ಒಳನಾಡು, ಉಡುಪಿ ಹಾಗೂ ಉತ್ತರ ಕನ್ನಡಕ್ಕೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆಯ ವಾತಾವರಣ ಕಂಡುಬರಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರ್ಗಿ, ವಿಜಯಪುರ ಹಾಗೂ ಯಾದಗಿರಿಯಲ್ಲಿ ತುಂತುರು ಮಳೆಯಾಗುವ ನಿರೀಕ್ಷೆಯಿದೆ.
ಇದನ್ನೂ ಓದಿ: ಕರಾವಳಿಗರೇ ಎಚ್ಚರ, ಭಾರೀ ಮಳೆ ಸಾಧ್ಯತೆ! ಎರಡ್ಮೂರು ದಿನ ಭಾರೀ ಮಳೆಯ ಸಂಭವ!!!