ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

H D Kumaraswamy : ಇದ್ದಕ್ಕಿದ್ದಂತೆ ಕುಮಾರಸ್ವಾಮಿ ಮೂಗಿಂದ ರಕ್ತ ಸೋರಲು ಕಾರಣವೇನು? ಬ್ಲಡ್ ಥಿನ್ನರ್ ಮಾತ್ರೆ ತಗೊಳ್ತಿದ್ದದ್ದು ಯಾಕೆ? ಹಾಗಂದ್ರೆ ಏನು?

10:05 AM Jul 29, 2024 IST | ಸುದರ್ಶನ್
UpdateAt: 10:05 AM Jul 29, 2024 IST
Advertisement

H D Kumarswamy: ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಜೆಡಿಎಸ್ ಮತ್ತು ಜೆಡಿಎಸ್ ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಂಡ ನಂತರ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ಮಾಧ್ಯಮಗಳ ಜತೆ ಮಾತನಾಡುವ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಮೂಗಿನಿಂದ ರಕ್ತಸ್ರಾವ ಉಂಟಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಇದೀಗ ಚಿಕಿತ್ಸೆ ಪಡೆದು ಜಯನಗರದ ಅಪೋಲೋ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಜೆಪಿ ನಗರದ ತಮ್ಮ ನಿವಾಸಕ್ಕೆ ವಾಪಸ್ಸಾಗಿದ್ದಾರೆ.

Advertisement

ಈ ಬೆನ್ನಲ್ಲೇ ಕುಮಾರಸ್ವಾಮಿ ಅವರಿಗೆ ದಿಢೀರನೆ ಮೂಗಿನಿಂದ ರಕ್ತಸ್ರಾವ ಉಂಟಾಗಲು ಕಾರಣ ಏನೂ ಎಂಬುದು ಆಪ್ತ ಮೂಲಗಳಿಂದ ತಿಳಿದುಬಂದಿದೆ. ಅದೇನೆಂದರೆ ಬ್ಲಡ್‌ ಥಿನ್ನರ್‌(Blood Thinner) ಔಷಧಿ ತೆಗೆದುಕೊಳ್ಳುತ್ತಿದ್ದದ್ದೇ ಇದಕ್ಕೆ ಕಾರಣ ಎಂದು ತಿಳಿದುಬಂದಿದೆ. ಹಾಗಿದ್ರೆ ಏನಿದು ಬ್ಲಡ್ ಥಿನ್ನರ್? ಇಲ್ಲಿದೆ ನೋಡಿ ಮಾಹಿತಿ.

ಏನಿದು ಬ್ಲಡ್‌ ಥಿನ್ನರ್‌? ‌
ಬ್ಲಡ್‌ ಥಿನ್ನರ್‌ ಎಂಬುದು ರಕ್ತ ಹೆಪ್ಪುಗಟ್ಟುವಿಕೆಯನ್ನು ತಡೆಯುವ ಔಷಧಿಯಾಗಿದೆ. ಮನುಷ್ಯನ ದೇಹದಲ್ಲಿ ರಕ್ತವನ್ನು ತೆಳುವಾಗಿಸುವುದಕ್ಕೆ ಈ ಔಷಧವನ್ನು ಬಳಸುತ್ತಾರೆ. ಬ್ಲಡ್‌ ಥಿನ್ನರ್‌ ರಕ್ತ ಹೆಪ್ಪುಗಟ್ಟುವಿಕೆಯನ್ನು ತಡೆದು ಹೃದಯಾಘಾತ, ಪಾರ್ಶ್ವವಾಯು ಮೊದಲಾದ ಅಪಾಯವನ್ನುಂಟುಮಾಡದಂತೆ ತಡೆಯುತ್ತದೆ. ವೈದ್ಯರ ಸಲಹೆ ಮೇರೆಗೆ ಮಾತ್ರವೇ ಇದನ್ನು ಬಳಸಬಹುದಾಗಿದೆ. ವೈದ್ಯರ ಸಲಹೆ ಇಲ್ಲದೆಯೇ ಈ ಔಷಧ ಸೇವಿಸಿದರೆ, ರಕ್ತಸ್ರಾವದಂತಗ ಅಡ್ಡಪರಿಣಾಮಗಳು ಉಂಟಾಗುತ್ತವೆ ಎಂದು ಸಂಬಂಧಪಟ್ಟ ವೈದ್ಯರು ಹೇಳಿದ್ದಾರೆ.

Advertisement

ಕುಮಾರಸ್ವಾಮಿ ಹೇಳಿದ್ದೇನು?
ಮೂರು ಬಾರಿ ನನಗೆ ಹೃದಯ ಕವಾಟನ್ನು ಬದಲಾವಣೆ ಮಾಡಲಾಗಿದೆ. ಬ್ಲಡ್ ತಿನ್ನರ್ ಮಾತ್ರೆ ತೆಗೆದುಕೊಳ್ಳುತ್ತೇನೆ. ರಕ್ತ ಗಟ್ಟಿ ಆಗಬಾರದು ಎನ್ನುವ ಕಾರಣಕ್ಕೆ ಈ ಮಾತ್ರೆ ತೆಗೆದುಕೊಳ್ಳುತ್ತೇನೆ. ಒತ್ತಡ ಜಾಸ್ತಿಯಾದಾಗ, ವಿಶ್ರಾಂತಿ ಇಲ್ಲದೆ ಇದ್ದಾಗ ನನಗೆ ಮೂಗಿನಿಂದ ರಕ್ತಸ್ರಾವ ಆಗುವುದು ಸಹಜ. ಕೆಲಸದ ಒತ್ತಡ ಕಡಿಮೆ ಮಾಡಿಕೊಳ್ಳಿ ಎಂದು ವೈದ್ಯರು ಸಲಹೆ ನೀಡಿದ್ದಾರೆ. ನನಗೆ ಸಿಕ್ಕಿರುವ ಸಮಯ ಒಂದೊಂದು ಕ್ಷಣವು ಮುಖ್ಯ. ಜನರಿಗೆ ಎನಾದರೂ ಒಂದು ಸಹಾಯ ಮಾಡಬೇಕು. ಕೇಂದ್ರದಿಂದ ರಾಜ್ಯಕ್ಕೆ ಕೊಡುಗೆ ಕೊಡಬೇಕು ಎಂದರು.

Related News

Advertisement
Advertisement